ADVERTISEMENT

ರಸ್ತೆ ಹೊಂಡ ಮುಚ್ಚಲು ಹಿರಿಯ ನಾಗರಿಕರ ಆಗ್ರಹ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2022, 15:49 IST
Last Updated 18 ಆಗಸ್ಟ್ 2022, 15:49 IST
ಕಾರವಾರ– ಕೈಗಾ ರಸ್ತೆಯ ಹೊಂಡಗಳನ್ನು ಮುಚ್ಚುವಂತೆ ಒತ್ತಾಯಿಸಿ ಶೇಜವಾಡದ ಜಾನ್ ಎಸ್.ಬೆರೆಟೋ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಪತ್ರ ಬರೆದಿರುವುದು
ಕಾರವಾರ– ಕೈಗಾ ರಸ್ತೆಯ ಹೊಂಡಗಳನ್ನು ಮುಚ್ಚುವಂತೆ ಒತ್ತಾಯಿಸಿ ಶೇಜವಾಡದ ಜಾನ್ ಎಸ್.ಬೆರೆಟೋ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಪತ್ರ ಬರೆದಿರುವುದು   

ಕಾರವಾರ: ‘ನಗರದ ಕಾರವಾರ– ಕೈಗಾ ರಸ್ತೆಯು ಹೊಂಡಗಳಿಂದ ಕೂಡಿದೆ. ಅದನ್ನು ದುರಸ್ತಿ ಮಾಡದಿದ್ದರೆ ಸ್ವಂತ ಖರ್ಚಿನಿಂದ ದುರಸ್ತಿಗೆ ಮುಂದಾಗುತ್ತೇನೆ’ ಎಂದು ಶೇಜವಾಡದ ಹಿರಿಯ ನಾಗರಿಕ ಜಾನ್ ಎಸ್.ಬೆರೆಟೋ (80) ವಿನೂತನ ರೀತಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.

ಈ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಮಾಡಿದ್ದಾರೆ. ‘ರಸ್ತೆಯನ್ನು ದುರಸ್ತಿ ಮಾಡುವಂತೆ ಶಾಸಕರು ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗ ಹಲವು ಬಾರಿ ಮನವಿ ಮಾಡಲಾಗಿತ್ತು. ಆದರೆ, ಯಾವುದೇ ಪ್ರಯೋಜನವಾಗಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಈ ಹಿಂದೆ ಹಲವು ಬಾರಿ ಹೊಂಡಗಳನ್ನು ಸ್ವಂತ ಹಣ ಖರ್ಚು ಮಾಡಿ ಮುಚ್ಚಿದ್ದೆ. ರಸ್ತೆ ಕಾಮಗಾರಿಯು ಕಳಪೆಯಾಗಿದ್ದು, ಅಪಘಾತಗಳಾಗಿ ಅನೇಕರು ಆಸ್ಪತ್ರೆ ಸೇರುತ್ತಿದ್ದಾರೆ. ಹಾಗಾಗಿ ಮತ್ತಷ್ಟು ಜನ ತೊಂದರೆಗೆ ಸಿಲುಕುವ ಮೊದಲು ರಸ್ತೆ ದುರಸ್ತಿ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.