ADVERTISEMENT

ಪದವಿ ಪ್ರವೇಶಕ್ಕೆ ಅರ್ಹತಾ ಪರೀಕ್ಷೆ: ವಿರೋಧ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2022, 15:40 IST
Last Updated 8 ಏಪ್ರಿಲ್ 2022, 15:40 IST
ಪದವಿ ವಿದ್ಯಾರ್ಥಿಗಳ ದಾಖಲಾತಿಗೆ ರಾಷ್ಟ್ರೀಯ ಅರ್ಹತೆ ಪರೀಕ್ಷೆ ನಡೆಸುವ ಕೇಂದ್ರೀಯ ಧನಸಹಾಯ ಆಯೋಗದ ಅಧ್ಯಕ್ಷರ ಸೂಚನೆ ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ.) ಜಿಲ್ಲಾ ಸಮಿತಿ ಸದಸ್ಯರು ಶುಕ್ರವಾರ ಉಪವಿಭಾಗಾಧಿಕಾರಿ ದೇವರಾಜ ಆರ್. ಅವರಿಗೆ ಮನವಿ ಸಲ್ಲಿಸಿದರು
ಪದವಿ ವಿದ್ಯಾರ್ಥಿಗಳ ದಾಖಲಾತಿಗೆ ರಾಷ್ಟ್ರೀಯ ಅರ್ಹತೆ ಪರೀಕ್ಷೆ ನಡೆಸುವ ಕೇಂದ್ರೀಯ ಧನಸಹಾಯ ಆಯೋಗದ ಅಧ್ಯಕ್ಷರ ಸೂಚನೆ ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ.) ಜಿಲ್ಲಾ ಸಮಿತಿ ಸದಸ್ಯರು ಶುಕ್ರವಾರ ಉಪವಿಭಾಗಾಧಿಕಾರಿ ದೇವರಾಜ ಆರ್. ಅವರಿಗೆ ಮನವಿ ಸಲ್ಲಿಸಿದರು   

ಶಿರಸಿ: ಪದವಿ ವಿದ್ಯಾರ್ಥಿಗಳ ದಾಖಲಾತಿಗೆ ರಾಷ್ಟ್ರೀಯ ಅರ್ಹತೆ ಪರೀಕ್ಷೆ ನಡೆಸುವ ಕೇಂದ್ರೀಯ ಧನಸಹಾಯ ಆಯೋಗದ ಅಧ್ಯಕ್ಷರ ಸೂಚನೆ ವಿರೋಧಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ.) ಜಿಲ್ಲಾ ಸಮಿತಿ ಸದಸ್ಯರು ಶುಕ್ರವಾರ ಉಪವಿಭಾಗಾಧಿಕಾರಿ ದೇವರಾಜ ಆರ್. ಅವರಿಗೆ ಮನವಿ ಸಲ್ಲಿಸಿದರು.

‘ರಾಜ್ಯ ಸರ್ಕಾರ ಪೂರ್ವ ತಯಾರಿ ಇಲ್ಲದೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸುತ್ತಿರುವುದರಿಂದ ರಾಜ್ಯದಲ್ಲಿ ಶೈಕ್ಷಣಿಕ ಅರಾಜಕತೆ ನಿರ್ಮಾಣವಾಗಿದೆ. ಬಡ, ಮಧ್ಯಮ ವರ್ಗ, ತಳಸಮುದಾಯಗಳ ಮಕ್ಕಳಿಗೆ ಉನ್ನತ ಶಿಕ್ಷಣ ಕೈಗೆ ಎಟುಕದಂತೆ ಮಾಡುವ ನೀತಿಗಳನ್ನು ಜಾರಿಗೆ ತರಲು ಮುಂದಾಗಿದೆ’ ಎಂದು ಎಸ್.ಎಫ್.ಐ. ಜಿಲ್ಲಾ ಸಂಚಾಲಕ ಗಣೇಶ್ ರಾಠೋಡ್ ಆರೋಪಿಸಿದರು.

‘ಈಚೆಗೆ ಬೆಂಗಳೂರಲ್ಲಿ ಯುಜಿಸಿ ಅಧ್ಯಕ್ಷರು ವಿಶ್ವವಿದ್ಯಾಲಯದ ಕುಲಪತಿಗಳ ಸಭೆಯಲ್ಲಿ ಪದವಿ ಹಂತದ ಬಿಎ, ಬಿಕಾಂ ,ಬಿಎಸ್ಸಿ ವಿಭಾಗಕ್ಕೆ ನೀಟ್ ಮಾದರಿಯ ರಾಷ್ಟ್ರೀಯ ಅರ್ಹತೆ ಪರೀಕ್ಷೆ ನಡೆಸಬೇಕು. ಇದಕ್ಕೆ ರಾಜ್ಯದ ವಿಶ್ವವಿದ್ಯಾಲಯಗಳ ಸಿದ್ದವಾಗಿ ನೊಂದಾಯಿಸಿಕೊಳ್ಳಬೇಕು ಎಂದು ಸೂಚನೆ ನೀಡಿರುವುದು ವಿದ್ಯಾರ್ಥಿಗಳಿಗೆ ಆತಂಕಕ್ಕೆ ಕಾರಣವಾಗಿದೆ. ರಾಜ್ಯ ಸರ್ಕಾರ ಈ ಸೂಚನೆ ತಿರಸ್ಕರಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಾದ ಅನೀಲ್ ವಾಲ್ಮೀಕಿ, ಆಕಾಶ ಲಮಾಣಿ, ಅನೀಲ್, ಮಾರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.