ಕಾರವಾರ: ಶಕ್ತಿ ಯೋಜನೆ ಅಡಿಯಲ್ಲಿ ಉಚಿತ ಪ್ರಯಾಣ ಪ್ರಮಾಣ 500 ಕೋಟಿ ಟ್ರಿಪ್ ಮೀರಿದ ಹಿನ್ನೆಲೆಯಲ್ಲಿ ಸೋಮವಾರ ಇಲ್ಲಿನ ಬಸ್ ನಿಲ್ದಾಣದಲ್ಲೂ ಸಂಭ್ರಮಾಚರಣೆ ನಡೆಸಲಾಯಿತು.
ಬಸ್‌ಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ನಡೆಸಲಾಯಿತು. ಯೋಜನೆಯ ಯಶಸ್ಸಿಗೆ ಕಾರಣೀಕರ್ತರಾದ ಕೆಲಸ ಮಾಡುತ್ತಿರುವ ಸಾರಿಗೆ ಸಂಸ್ಥೆಯ ಚಾಲಕ, ನಿರ್ವಾಹಕರಿಗೆ ಸನ್ಮಾನಿಸಲಾಯಿತು.
‘ಸಾರಿಗೆ ನಿಗಮದ ಕಾರವಾರ ಘಟಕ ವ್ಯಾಪ್ತಿಯಲ್ಲಿ ಈವರೆಗೆ 1.30 ಕೋಟಿಗೂ ಅಧಿಕ ಉಚಿತ ಟ್ರಿಪ್ ಸೌಲಭ್ಯ ಮಹಿಳಾ ಪ್ರಯಾಣಿಕರಿಗೆ ಸಿಕ್ಕಿದೆ. ಗ್ರಾಮೀಣ ಭಾಗದಿಂದ ದುಡಿಮೆಗೆ ಬರುವವರು, ವಿದ್ಯಾರ್ಥಿನಿಯರಿಗೆ ಹೆಚ್ಚಿನ ಅನುಕೂಲ ಆಗಿದೆ’ ಎಂದು ತಾಲ್ಲೂಕು ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷ ರಾಜೇಂದ್ರ ರಾಣೆ ಹೇಳಿದರು.
ತಾಲ್ಲೂಕು ಪಂಚಾಯಿತಿ ಇಒ ವೀರನಗೌಡ ಏಗನಗೌಡರ್, ಸಾರಿಗೆ ಸಂಸ್ಥೆಯ ಘಟಕದ ವ್ಯವಸ್ಥಾಪಕಿ ಸೌಮ್ಯ ನಾಯಕ, ತಾಲ್ಲೂಕು ಗ್ಯಾರಂಟಿ ಅಭಿವೃದ್ಧಿ ಸಮಿತಿಯ ಸದಸ್ಯರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.