ADVERTISEMENT

ಶಿರಸಿ: ಶಾಮರಾವ್, ಅಜ್ಜೀಬಳ ದತ್ತಿ ಪ್ರಶಸ್ತಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 4 ಜೂನ್ 2025, 14:12 IST
Last Updated 4 ಜೂನ್ 2025, 14:12 IST
ಶೈಲಜಾ ಗೋರ್ನಮನೆ
ಶೈಲಜಾ ಗೋರ್ನಮನೆ   

ಶಿರಸಿ: ಕಾರ್ಯನಿರತ ಪತ್ರಕರ್ತರ ಸಂಘದ ಉತ್ತರ ಕನ್ನಡ ಜಿಲ್ಲಾ ಘಟಕವು 2025ನೇ ಸಾಲಿನ ವಾರ್ಷಿಕ ದತ್ತಿನಿಧಿ ಪ್ರಶಸ್ತಿಯನ್ನು ಘೋಷಿಸಿದ್ದು, ಶಾಮರಾವ್ ದತ್ತಿನಿಧಿ ಪ್ರಶಸ್ತಿಗೆ ಶಿರಸಿಯ ಪತ್ರಕರ್ತೆ ಶೈಲಜಾ ಗೋರ‍್ನಮನೆ ಹಾಗೂ ಅಜ್ಜೀಬಳ ದತ್ತಿನಿಧಿ ಪ್ರಶಸ್ತಿಗೆ ಕಾರವಾರದ ಪತ್ರಕರ್ತ ದೀಪಕಕುಮಾರ ಶೇಣ್ವಿ ಅವರು ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಕ್ರಮವಾಗಿ ₹10 ಹಾಗೂ ₹5 ಸಾವಿರ ನಗದು ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿದೆ. 

ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ. ಸುಬ್ರಾಯ ಭಟ್ ಬಕ್ಕಳ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಜುಲೈ 1ರಂದು ಶಿರಸಿಯಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಸಂಘದ ಪ್ರಧಾನ ಕಾರ್ಯದರ್ಶಿ ಸುಮಂಗಲಾ ಹೊನ್ನೆಕೊಪ್ಪ ತಿಳಿಸಿದ್ದಾರೆ.

ದೀಪಕಕುಮಾರ ಶೇಣ್ವಿ 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT