ಬಂಧನ
(ಪ್ರಾತಿನಿಧಿಕ ಚಿತ್ರ)
ಗೋಕರ್ಣ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ ಇಲ್ಲಿಯ ತಾರಮಕ್ಕಿಯ ನಿವಾಸಿ ಶಂಕರ ಕೃಷ್ಣ ಗೌಡ (25) ಎಂಬುವವನ್ನು ಶುಕ್ರವಾರ ಪೊಲೀಸರು ವಶಕ್ಕೆ ಪಡೆದು ಕ್ರಮ ಕೈಗೊಂಡಿದ್ದಾರೆ.
ಇವರು ಇಲ್ಲಿಯ ಬಂಗ್ಲೆಗುಡ್ಡದ ಓಂ ಬೀಚ್ ಕ್ರಾಸ್ ರಸ್ತೆ ಹತ್ತಿರ ಸಾರ್ವಜನಿಕ ರಸ್ತೆಯಲ್ಲಿ ಗಾಂಜಾ ಸೇವಿಸಿ, ಅಮಲಿನಲ್ಲಿ ಅಲೆದಾಡುತ್ತಿದ್ದಾಗ ಪೊಲೀಸ್ ನಿರೀಕ್ಷಕ ಶ್ರೀದರ ಎಸ್.ಆರ್.ನೇತೃತ್ವದ ಪೊಲೀಸ್ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ.
ಅನುಮಾನದಿಂದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿದ್ದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.