ADVERTISEMENT

ಸಸಿಕಾಂತ್ ಸೆಂಥಿಲ್, ಬೆಂಬಲಿಸಿದವರ ಜತೆ ಪಾಕಿಸ್ತಾನಕ್ಕೆ ಹೋಗಲಿ–ಅನಂತಕುಮಾರ್ ಹೆಗಡೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2019, 19:38 IST
Last Updated 8 ಸೆಪ್ಟೆಂಬರ್ 2019, 19:38 IST
   

ಶಿರಸಿ: ಭಾರತೀಯ ಆಡಳಿತ ಸೇವೆಗೆ ರಾಜೀನಾಮೆ ನೀಡಿ ಹೊರ ಬಂದಿರುವ ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ವಿರುದ್ಧ ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟ್ವಿಟ್ಟರ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, ‘ಈತ ಮಾಡಬೇಕಾದ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು! ಇದು ಪ್ರಾಯೋಗಿಕವಾಗಿಯೂ ಸುಲಭ ಮತ್ತು ಅಂತಿಮ ಪರಿಹಾರ ಕೂಡ. ಇಲ್ಲೇ ಇದ್ದು ದೇಶ ಒಡೆಯುವ ಬದಲು ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು! ಇದರಲ್ಲಾದರೂ ನಿಯತ್ತು ತೋರಿಸಲಿ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT