ಶಿರಸಿ: ನಗರದಲ್ಲಿ ನಿರ್ಮಾಣ ಹಂತದಲ್ಲಿರುವ ಪಂಡಿತ ಸಾರ್ವಜನಿಕ ಆಸ್ಪತ್ರೆ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ವೇಗ ನೀಡುವ ಜತೆ ತ್ವರಿತವಾಗಿ ಕಾಮಗಾರಿ ಮುಗಿಸಲು ಶಾಸಕ ಭೀಮಣ್ಣ ನಾಯ್ಕ ಸೂಚಿಸಿದರು.
ಆಸ್ಪತ್ರೆ ಕಾಮಗಾರಿ ಜಾಗಕ್ಕೆ ಮಂಗಳವಾರ ತೆರಳಿ ಕಾಮಗಾರಿ ವೀಕ್ಷಿಸಿದ ಅವರು, ‘ 250 ಹಾಸಿಗೆಗಳ ಸೌಲಭ್ಯವುಳ್ಳ ಆಸ್ಪತ್ರೆ ಸೇವೆ ಕ್ಷೇತ್ರದ ಜನರಿಗೆ ಶೀಘ್ರ ದೊರೆಯಬೇಕು. ಈ ನಿಟ್ಟಿನಲ್ಲಿ ಗುತ್ತಿಗೆದಾರರಿಗೆ ವೇಗವಾಗಿ ಕಾಮಗಾರಿ ಮುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಸೂಚಿಸಬೇಕು’ ಎಂದರು.
ಇದಕ್ಕೂ ಮೊದಲು ಆಸ್ಪತ್ರೆಯಲ್ಲಿ ಆರೋಗ್ಯ ಸುರಕ್ಷಾ ಸಮಿತಿ ಸಭೆ ನಡೆಸಿ, ವೈದ್ಯಕೀಯ ಸೌಲಭ್ಯಗಳು ರೋಗಿಗಳಿಗೆ ಸಮರ್ಪಕ ಬಳಕೆ ಆಗುತ್ತಿರುವ ಬಗ್ಗೆ ಮಾಹಿತಿ ಪಡೆದರು.
‘ರೋಗಿಗಳಿಗೆ ಒದಗಿಸಲಾಗುತ್ತಿರುವ ಸವಲತ್ತು, ಶೌಚಾಲಯ ವ್ಯವಸ್ಥೆ, ವೈದ್ಯಕೀಯ ಸೇವೆ, ಆಸ್ಪತ್ರೆಯ ಸ್ವಚ್ಛತೆ, ಆಂಬುಲೆನ್ಸ್ ಸೇವೆ, ಔಷಧೋಪಚಾರಗಳು ಸಮರ್ಪಕವಾಗಿ ರೋಗಿಗಳಿಗೆ ಬಳಕೆಯಾಗುವ ನಿಟ್ಟಿನಲ್ಲಿ ಯಾವುದೇ ಸಮಸ್ಯೆಗಳಿದ್ದಲ್ಲಿ ಕೂಡಲೆ ಪರಿಹರಿಸಬೇಕು’ ಎಂದು ವೈದ್ಯಾಧಿಕಾರಿ ನೇತ್ರಾವತಿ ಶಿರಸಿಕರ ಅವರಿಗೆ ಸೂಚನೆ ನೀಡಿದರು.
ಉಪವಿಭಾಗಾಧಿಕಾರಿ ಕೆ.ವಿ.ಕಾವ್ಯಾರಾಣಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.