
ಶಿರಸಿ: ಫೆಬ್ರವರಿ ಎರಡನೇ ವಾರದಲ್ಲಿ ನಡೆಯಲಿರುವ ಕನ್ನಡ ಸಾಹಿತ್ಯ ಪರಿಷತ್ ಶಿರಸಿ ತಾಲ್ಲೂಕಿನ 9ನೇ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಸಾಹಿತಿ ಹಾಗೂ ಚಿಂತಕ ಡಿ.ಎಸ್.ನಾಯ್ಕ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಪರಿಷತ್ ಶಿರಸಿ ಘಟಕದ ಅಧ್ಯಕ್ಷ ಜಿ. ಸುಬ್ರಾಯ ಬಕ್ಕಳ ಅವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಕಾರ್ಯಕಾರಿಣಿಯಲ್ಲಿ ಆಯ್ಕೆ ಮಾಡಲಾಯಿತು. ಡಿ.ಎಸ್.ನಾಯ್ಕ ಅವರು ಸಾಹಿತ್ಯ ಕ್ಷೇತ್ರದಲ್ಲಿ ದಶಕಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಇದುವರೆಗೆ ಅವರ 13 ಕೃತಿಗಳು ಪ್ರಕಟವಾಗಿದ್ದು, ಕಥಾ ಸಂಕಲನ, ವ್ಯಕ್ತಿಚಿತ್ರಣ ಹಾಗೂ ಶೀಲದ ಸೆಲೆ ಎಂಬ ಕಾದಂಬರಿಯ ಮೂಲಕ ಗುರುತಿಸಿಕೊಂಡಿದ್ದಾರೆ. ಕಲಾರಂಗ ಸಾಂಸ್ಕೃತಿಕ ವೇದಿಕೆಯ ಮೂಲಕ ಸಾಹಿತ್ಯಿಕ ಚಟುವಟಿಕೆಗಳನ್ನು ನಡೆಸುತ್ತಿರುವ ಇವರು, ಪ್ರಸ್ತುತ ಪತ್ರಿಕೆಗಳಲ್ಲಿ ಪುಸ್ತಕ ಅವಲೋಕನ ಬರೆಯುತ್ತಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿನ ಅವರ ಅಪಾರ ಸೇವೆ ಪರಿಗಣಿಸಿ ಆಯ್ಕೆ ಮಾಡಲಾಗಿದೆ’ ಎಂದು ತಿಳಿಸಲಾಗಿದೆ.
ಸಭೆಯಲ್ಲಿ ಪರಿಷತ್ ಪದಾಧಿಕಾರಿಗಳಾದ ವಾಸುದೇವ ಶಾನಭಾಗ, ಕೆ.ಎನ್.ಹೊಸ್ಮನಿ, ಸದಸ್ಯರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.