ಯಲ್ಲಾಪುರ: ಬೆಂಗಳೂರಲ್ಲಿ ಈಚೆಗೆ ನಡೆದ ಕ್ರಿಕೆಟ್ ವಿಜಯೋತ್ಸವದಲ್ಲಿ ಕಾಲ್ತುಳಿತಕ್ಕೆ ಒಳಗಾಗಿ ಸಾವಿಗೀಡಾದ ಪ್ರತಿಯೊಬ್ಬರ ಕುಟುಂಬಕ್ಕೆ ಆರ್‌ಸಿಬಿಯಿಂದ ಕೂಡಲೇ ತಲಾ ಒಂದು ಕೋಟಿ ಪರಿಹಾರ ನೀಡಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ ಆಗ್ರಹಿಸಿದ್ದಾರೆ.
ಆರ್‌ಸಿಬಿ ತಪ್ಪಿನಿಂದಾಗಿಯೇ ಈ ಅವಘಡ ನಡೆದಿದೆ. ಆರ್‌ಸಿಬಿ ಜಾಹೀರಾತು ಮುಂತಾದ ಮೂಲದಿಂದ ಎರಡು ಸಾವಿರ ಕೋಟಿಗೂ ಅಧಿಕ ಹಣ ಸಂಗ್ರಹಿಸಿದೆ. ಹೀಗಾಗಿ ಮೃತರ ಕುಟುಂಬಕ್ಕೆ ತಲಾ ಒಂದು ಕೋಟಿ ರೂ ಪರಿಹಾರ ನೀಡಬೇಕು. ಪಕ್ಷಾತೀತವಾಗಿ ಎಲ್ಲರೂ ಈ ಕುರಿತು ಒತ್ತಡ ಹಾಕಬೇಕು. ಈ ಕುರಿತು ಅಭಿಯಾನ ಆರಂಭಿಸಲಾಗುವುದು. ರಾಜ್ಯದಾದ್ಯಂತ ಅಭಿಯಾನ ಆರಂಭ ಆಗಬೇಕು ಎಂದು ಭಾನುವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.