
ಪ್ರಜಾವಾಣಿ ವಾರ್ತೆ
ಮುಂಡಗೋಡ: ಪಟ್ಟಣದ ದೈವಜ್ಞ ಸಭಾಭವನದಲ್ಲಿ ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ ಭಾವಚಿತ್ರ ವೇದಿಕೆಯಲ್ಲಿ ಅಳವಡಿಸಿರುವ ಬ್ಯಾನರ್ ನಲ್ಲಿ ಇಲ್ಲದಿರುವುದು ವಿಶೇಷವಾಗಿತ್ತು.
ಕಳೆದ ಕೆಲವು ತಿಂಗಳಿಂದ ಬಿಜೆಪಿ ಪಕ್ಷದಿಂದ ಶಾಸಕ ಹೆಬ್ಬಾರ ಅಂತರ ಕಾಯ್ದುಕೊಳ್ಳುತ್ತಿರುವುದರಿಂದ, ಲೋಕಸಭಾ ಚುನಾವಣಾ ಪ್ರಚಾರಾರ್ಥವಾಗಿ ಇದೇ ಮೊದಲ ಬಾರಿಗೆ ಪಕ್ಷದ ವತಿಯಿಂದ ಪಟ್ಟಣದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರ ಭಾವಚಿತ್ರವನ್ನು ಹಾಕದೇ ಪಕ್ಷದ ಸ್ಪಷ್ಟ ಸಂದೇಶ ನೀಡಲಾಗುತ್ತಿದೆ ಎಂದು ಕಾರ್ಯಕರ್ತರು ಮಾತನಾಡುತ್ತಿರುವುದು ಕಂಡುಬಂತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.