ADVERTISEMENT

ಉತ್ತರ ಕನ್ನಡ | ಜಿಲ್ಲೆಯಲ್ಲಿ ಸಂಜೆ 6ಕ್ಕೆ ಎಲ್ಲ ಚಟುವಟಿಕೆ ಬಂದ್

ನಿಷೇಧಾಜ್ಞೆಯ ಸಮರ್ಪಕ ಪಾಲನೆಗೆ ಕ್ರಮ: ಜಿಲ್ಲಾಧಿಕಾರಿ

​ಪ್ರಜಾವಾಣಿ ವಾರ್ತೆ
Published 19 ಮೇ 2020, 13:27 IST
Last Updated 19 ಮೇ 2020, 13:27 IST

ಕಾರವಾರ:‘ಜಿಲ್ಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಸಂಜೆ 6 ಗಂಟೆಗೆ ಮುಚ್ಚಬೇಕು. 7 ಗಂಟೆಯ ಬಳಿಕ ಆರೋಗ್ಯ ಸಂಬಂಧಿ ಕೆಲಸದಲ್ಲಿ ಇರುವವರನ್ನು ಹೊರತುಪಡಿಸಿ ಮತ್ಯಾರೂ ಸಂಚರಿಸಬಾರದು’ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂಜೆ 7ರಿಂದ ಬೆಳಿಗ್ಗೆ 7ರವರೆಗೆ ಕರ್ಫ್ಯೂ ರೀತಿಯ ವಾತಾವರಣಕ್ಕಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅದರ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಂಗಡಿಗಳು ಸಂಜೆ 6ಕ್ಕೆ ಮುಚ್ಚಬೇಕು. ನಂತರ ಕದ ಹಾಕುವುದಾದರೆಪೊಲೀಸರು ಬಂದು ಸೂಚನೆ ಕೊಟ್ಟು ಪ್ರಕ್ರಿಯೆ ಮುಗಿಯುವಷ್ಟರಲ್ಲಿರಾತ್ರಿ 8.30 ಆಗುತ್ತದೆ. ಅದರಿಂದ ನಿಷೇಧಾಜ್ಞೆಯ ಮೂಲ ಉದ್ದೇಶದ ಪಾಲನೆ ಆಗುವುದಿಲ್ಲ’ ಎಂದು ಅಭಿಪ್ರಾಯಪಟ್ಟರು.

‘ಉಳಿದಂತೆ ಕೇಂದ್ರ ಮತ್ತ ರಾಜ್ಯ ಸರ್ಕಾರಗಳು ನೀಡಿರುವ ಎಲ್ಲ ನಿರ್ದೇಶಗಳನ್ನು ನಾಲ್ಕನೇ ಹಂತದ ಲಾಕ್‌ಡೌನ್‌ನಲ್ಲಿ ಪಾಲಿಸಲಾಗುತ್ತದೆ. ಅಂತರರಾಜ್ಯ ಸಂಚಾರಕ್ಕೆ ಸೇವಾ ಸಿಂಧು ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬೇಕು. ರಾಜ್ಯದ ಒಳಗೆ ಸಂಚರಿಸಲು ಯಾವುದೇ ಪಾಸ್ ಅಗತ್ಯವಿಲ್ಲ’ ಎಂದು ಸ್ಪಷ್ಟಪಡಿಸಿದರು.

ADVERTISEMENT

‘ಜನರು ತಮ್ಮ ನಡುವೆ ಅಂತರ ಕಾಯ್ದುಕೊಳ್ಳಬೇಕು. ಸಾರ್ವಜನಿಕವಾಗಿ ಸಂಚರಿಸುವಾಗ ಮುಖಗವಸು ಧರಿಸುವುದು ಕಡ್ಡಾಯವಾಗಿದೆ. ಮದುವೆ, ಅಂತ್ಯಸಂಸ್ಕಾರಗಳನ್ನು ಹಮ್ಮಿಕೊಳ್ಳುವ ಮೊದಲು ಸ್ಥಳೀಯ ಸಂಸ್ಥೆಗಳಿಂದ ಅನುಮತಿ ಪಡೆದುಕೊಳ್ಳಬೇಕು’ ಎಂದು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.