
ಸಿದ್ದಾಪುರ: ಪಟ್ಟಣದ ಸಮೀಪದ ಅವರಗುಪ್ಪ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಕೊಲೆ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಹಾಗೂ ಕೊಲೆಯಾಗಿರುವ ವಸಂತ ನಾಯ್ಕ ಕುಟುಂಬಕ್ಕೆ ಪರಿಹಾರ ನೀಡಬೇಕು. ಗಾಯಾಳುಗಳ ಚಿಕಿತ್ಸೆ ಉಚಿತವಾಗಿ ಸಿಗುವಂತೆ ಮಾಡಬೇಕು ಎಂದು ಆಗ್ರಹಿಸಿ ಸೋಮವಾರ ಪೊಲೀಸ್ ಠಾಣೆಯ ಎದುರು ಸಾರ್ವಜನಿಕರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಕಾರ್ಯಕಾರಣಿ ಸದಸ್ಯ ಕೆ.ಜಿ.ನಾಯ್ಕ ಹಣಜೀಬೈಲ್,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ,ಬಿಜೆಪಿ ಮಂಡಳ ಅಧ್ಯಕ್ಷ ತಿಮ್ಮಪ್ಪ ಎಂ.ಕೆ. ಪ್ರಮುಖರಾದ ನಂದನ ಬೋರ್ಕರ್, ರಾಮಕೃಷ್ಣ ನಾಯ್ಕ, ಸಿ.ಆರ್.ನಾಯ್ಕ, ಮುಂತಾದವರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.