ADVERTISEMENT

ಸಿದ್ದರಾಮಯ್ಯ ತಪ್ಪು ಮಾಡಿಲ್ಲ: ಸಚಿವ ಮಂಕಾಳ ವೈದ್ಯ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2024, 13:49 IST
Last Updated 24 ಸೆಪ್ಟೆಂಬರ್ 2024, 13:49 IST
ಮಂಕಾಳ ವೈದ್ಯ
ಮಂಕಾಳ ವೈದ್ಯ   

ಭಟ್ಕಳ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ ತೀರ್ಪನ್ನು ಗೌರವಿಸುತ್ತೇನೆ. ಮುಖ್ಯಮಂತ್ರಿ ಯಾವುದೇ ತಪ್ಪು ಮಾಡಿಲ್ಲ. ಅವರ ಮೇಲೆ ಬಂದಿರುವ ಆರೋಪದ ಬಗ್ಗೆ ಯಾವುದೇ ಹುರುಳಿಲ್ಲ’ ಎಂದು ಸಚಿವ ಮಂಕಾಳ ವೈದ್ಯ ಹೇಳಿದರು.

ಭಟ್ಕಳ ತಾಲ್ಲೂಕು ಪಂಚಾಯಿತಿಯಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಸಿದ್ದರಾಮಯ್ಯನವರ ಮೇಲಿನ ಆರೋಪದ ಬಗ್ಗೆ ನಾನು ಸರಿಯಾಗಿ ತಿಳಿದುಕೊಂಡಿದ್ದು, ಅವರು ಯಾವುದೇ ತಪ್ಪು ಮಾಡಿಲ್ಲ ಎಂದು ಧೈರ್ಯದಿಂದ ಹೇಳುತ್ತಿದ್ದೇನೆ. ನನಗೆ ತಕ್ಷಣ ಬೆಂಗಳೂರಿಗೆ ಆಗಮಿಸುವಂತೆ ಯಾರಿಂದಲೂ ಕರೆ ಬಂದಿಲ್ಲ’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT