
ಕಾರವಾರ: ‘90ರ ದಶಕದ ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳುವುದಕ್ಕಾಗಿ ಈಗ ಸಂಪೂರ್ಣ ಬದಲಾಗಿದ್ದಾರೆ. ಸಿದ್ಧಾಂತಗಳನ್ನೆಲ್ಲ ಗಾಳಿಗೆ ತೂರಿದ್ದಾರೆ’ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದರು.
‘ನಾನು, ಸಿದ್ದರಾಮಯ್ಯ ಒಂದು ಕಾಲದಲ್ಲಿ ಒಟ್ಟಿಗೆ ಇದ್ದವರು. ಆಗಿನ ಸಮಯಕ್ಕಿಂತ ಈಗ ಅವರು ಭಿನ್ನವಾಗಿದ್ದಾರೆ. ಸಂಪೂರ್ಣ ಬಹುಮತ ಸಿಕ್ಕರೂ ಜನಪರ ಆಡಳಿತ ನೀಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ಇದೇ ಕಾರಣಕ್ಕೆ ಜನರು ಭ್ರಮನಿರಸನಗೊಂಡಿದ್ದಾರೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
‘ರಾಜ್ಯದಲ್ಲಿ ಎಲ್ಲೇ ಹೋದರೂ ಜನಸಾಮಾನ್ಯರು ಸಿದ್ದರಾಮಯ್ಯ ಯಾವಾಗ ಅಧಿಕಾರದಿಂದ ಕೆಳಗಿಳಿಯುತ್ತಾರೆ ಎಂದು ಪ್ರಶ್ನಿಸುತ್ತಾರೆ. ಈಗಿನ ರಾಜ್ಯ ಸರ್ಕಾರದಿಂದ ದುರಾಡಳಿತವೇ ಹೆಚ್ಚಿದೆ. ಹೇಳುವವರು, ಕೇಳುವವರು ಇಲ್ಲದ ಸ್ಥಿತಿಯಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.