ಶಿರಸಿ: ಅರಣ್ಯ ಹಕ್ಕು ಕಾಯ್ದೆಯಡಿ ಸಲ್ಲಿಸಿದ್ದ ಅರ್ಜಿಗಳನ್ನು ಪುನರ್ ಪರಿಶೀಲಿಸದೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೇಂದ್ರ ಸರ್ಕಾರಕ್ಕೆ ಅಂತಿಮ ವರದಿ ಸಲ್ಲಿಸಿದ್ದನ್ನು ಖಂಡಿಸಿ, ಶಿರಸಿಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಹೆಸರು ಉಲ್ಲೇಖಿಸಿ 20 ಸಾವಿರಕ್ಕೂ ಹೆಚ್ಚು ಆಕ್ಷೇಪಣಾ ಅರ್ಜಿಗಳು ಸಲ್ಲಿಕೆಯಾಗಿವೆ.
ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಶನಿವಾರ ಇಲ್ಲಿ ಅಭಿಯಾನದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಬಂದಿದ್ದ ಅರಣ್ಯವಾಸಿಗಳು ಆಕ್ಷೇಪಣಾ ಮೇಲ್ಮನವಿಗೆ ಸಹಿ ಹಾಕಿದರು. ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಿ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.