ADVERTISEMENT

ಶಿರಸಿ ಪ್ರತ್ಯೇಕ ಜಿಲ್ಲೆ: ರಾಜಕಾರಣಿಗಳಿಗಿಂತ ಜನರ ಅಭಿಪ್ರಾಯ ಮುಖ್ಯ –ದೇಶಪಾಂಡೆ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2022, 7:48 IST
Last Updated 11 ಡಿಸೆಂಬರ್ 2022, 7:48 IST
ಶಾಸಕ ಆರ್.ವಿ.ದೇಶಪಾಂಡೆ
ಶಾಸಕ ಆರ್.ವಿ.ದೇಶಪಾಂಡೆ   

ಶಿರಸಿ: ಉತ್ತರ ಕನ್ನಡವನ್ನು ವಿಭಜಿಸಿ ಶಿರಸಿ ಪ್ರತ್ಯೇಕ ಜಿಲ್ಲೆ ರಚಿಸುವ ವಿಚಾರಕ್ಕೆ ಸಂಬಂಧಿಸಿ ರಾಜಕಾರಣಿಗಳಿಗಿಂತ ಜನರ ಅಭಿಪ್ರಾಯ ಮುಖ್ಯ ಎಂದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.

ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರ ಜತೆ ಅವರು ಮಾತನಾಡಿದರು.

'ಜಿಲ್ಲೆ ದೊಡ್ಡದಾಗಿರುವ ಕಾರಣ ಅಭಿವೃದ್ಧಿ ಆಗಿಲ್ಲ ಎಂಬ ವಾದ ಒಪ್ಪಲಾಗದು. ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಸುದೀರ್ಘ ಅವಧಿಗೆ ಆಡಳಿತ ನಡೆಸಿದ್ದೇನೆ. ಸಾಕಷ್ಟು ಅಭಿವೃದ್ಧಿಯನ್ನೂ ಕಂಡಿದೆ. ಆದರೆ ಪ್ರತ್ಯೇಕ ಜಿಲ್ಲೆಗೆ ಆಗ್ರಹ ಈಚೆಗೆ ಬಲವಾಗಿರುವ ಕಾರಣ ಜನರ ಅಭಿಪ್ರಾಯ ಸಂಗ್ರಹ ಮಾಡಬೇಕು' ಎಂದರು.

ADVERTISEMENT

ಶಿರಸಿ ಪ್ರತ್ಯೇಕ ಜಿಲ್ಲೆ ರಚನೆಗೆ ಜನರ ಒತ್ತಡವಿದ್ದು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು ಎಂದುಈಚೆಗಷ್ಟೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಶಿರಸಿಯಲ್ಲಿ ಹೇಳಿದ್ದರು. ಪ್ರತ್ಯೇಕ ಜಿಲ್ಲೆ ರಚನೆಯ ವಿಚಾರವಾಗಿ ತಾನು ಧ್ವನಿ ಎತ್ತಿಲ್ಲ. ಆದರೆ ಬುದ್ಧಿಜೀವಿಗಳು, ಶಾಸಕರೊಂದಿಗೆ ಚರ್ಚಿಸಿ ಅಭಿಪ್ರಾಯ ಆಲಿಸುತ್ತೇವೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಶನಿವಾರ ಅಂಕೋಲಾದಲ್ಲಿ ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.