ಶಿರಸಿ : ಯುಗಾದಿಯ ಶುಭದಿನದಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ವರ್ಣವಲ್ಲೀ ಮಠಕ್ಕೆ ಭೇಟಿ ನೀಡಿ, ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.
ದಂಪತಿ ಸಮೇತವಾಗಿ ಕಾಗೇರಿ ಅವರು ಮಠಕ್ಕೆ ಭೇಟಿ ನೀಡಿ, ಸ್ವರ್ಣವಲ್ಲೀ ಗಂಗಾಧರೇಂದ್ರ ಸ್ವಾಮಿಜಿ ಅವರಿಂದ ಮತ್ತು ಆನಂದಬೋಧೇಂದ್ರ ಸರಸ್ವತಿ ಸ್ವಾಮೀಜಿ ಅವರಿಂದ ಮಂತ್ರಾಕ್ಷತೆ ಹಾಗೂ ಆಶೀರ್ವಾದ ಪಡೆದರು.
ಈ ವೇಳೆ ಕಾಗೇರಿ ಅವರ ಪುತ್ರಿ ಶ್ರೀಲಕ್ಷ್ಮೀ ಹೆಗಡೆ, ಪ್ರಮುಖರಾದ ಅನಂತ ಹೆಗಡೆ ಅಶೀಸರ, ಸದಾನಂದ ಭಟ್, ಉಷಾ ಹೆಗಡೆ ಇನ್ನಿತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.