
ಪ್ರಜಾವಾಣಿ ವಾರ್ತೆಶಿರಸಿ: ಕನ್ನಡದ ಪೂಜಾರಿ, ವಾಗ್ಮಿ ಹಿರೇಮಗಳೂರು ಕಣ್ಣನ್ ಅವರ ಜತೆ ಮಾತುಕತೆ ಎಂಬ ವಿಶಿಷ್ಟ ಕಾರ್ಯಕ್ರಮ ಮೇ 31 ಹಾಗೂ ಜೂನ್ 1ರಂದು ನಗರದ ಟಿಎಂಎಸ್ ಸಭಾಂಗಣದಲ್ಲಿ ಸಂಜೆ 5.30ರಿಂದ ನಡೆಯಲಿದೆ.
ವಿಶ್ವಶಾಂತಿ ಸೇವಾ ಟ್ರಸ್ಟ್ ಕರ್ನಾಟಕ ಆಯೋಜಿಸಿದ ಕಾರ್ಯಕ್ರಮದಲ್ಲಿ ಕಣ್ಣನ್ ಅವರ ಜತೆ ಸಂಸ್ಕೃತಿ ಚಿಂತಕಿ ನಾಗಶ್ರೀ ತ್ಯಾಗರಾಜ್ ಸಂವಾದ ನಡೆಸಲಿದ್ದಾರೆ. ಕಾರ್ಯಕ್ರಮದಲ್ಲಿ ಶಿರಸಿ ಜೀವಜಲ ಕಾರ್ಯಪಡೆ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್, ಟ್ರಸ್ಟ್ ಅಧ್ಯಕ್ಷ ರವೀಂದ್ರ ಭಟ್, ಧಾರವಾಡ ಹಾಲು ಒಕ್ಕೂಟದ ಉಪಾಧ್ಯಕ್ಷ ಸುರೇಶ್ಚಂದ್ರ ಹೆಗಡೆ ಕೆಶಿನ್ಮನೆ, ರಾಜದೀಪ ಟ್ರಸ್ಟ್ ಅಧ್ಯಕ್ಷ ದೀಪಕ ದೊಡ್ಡೂರು ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್ ಕಾರ್ಯದರ್ಶಿ ಗಾಯತ್ರೀ ರಾಘವೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.