ADVERTISEMENT

ಸಂವಿಧಾನ, ಪ್ರಜಾಪ್ರಭುತ್ವ ಎರಡು ಕಣ್ಣುಗಳಿದ್ದಂತೆ: ಭೀಮಣ್ಣ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2024, 12:56 IST
Last Updated 15 ಸೆಪ್ಟೆಂಬರ್ 2024, 12:56 IST
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಭಾನುವಾರ ಶಿರಸಿಯಲ್ಲಿ ನಿರ್ಮಿಸಿದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭೀಮಣ್ಣ ನಾಯ್ಕ ಪಾಲ್ಗೊಂಡರು
ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಭಾನುವಾರ ಶಿರಸಿಯಲ್ಲಿ ನಿರ್ಮಿಸಿದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭೀಮಣ್ಣ ನಾಯ್ಕ ಪಾಲ್ಗೊಂಡರು    

ಶಿರಸಿ: ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಗೌರವಿಸಿ ಬದುಕಿದರೆ ಸಾಮಾಜಿಕ ಸಾಮರಸ್ಯದ ಸಮಾಜ ನಿರ್ಮಿಸಲು ಸಾಧ್ಯ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು. 

ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಭಾನುವಾರ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಪಟಿಸುವ ಜತೆ ನಗರದಲ್ಲಿ ಏಳು ಸಾವಿರಕ್ಕೂ ಹೆಚ್ಚು ಜನರ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು, ‘ದೇಶದ ನಾಗರಿಕರಿಗೆ ಸಮಾನತೆ ಮಾಡಿಕೊಟ್ಟಿದ್ದು ಸಂವಿಧಾನವಾಗಿದೆ. ಅದರಂತೆ ಸಮಾನ ಅವಕಾಶ ನೀಡುತ್ತಿರುವುದು ಪ್ರಜಾಪ್ರಭುತ್ವವಾಗಿದೆ. ಇವೆರಡೂ ಭಾರತದ ಎರಡು ಕಣ್ಣುಗಳಿದ್ದಂತೆ. ಇಂಥ ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ಗೌರವಿಸಲು ಸರ್ಕಾರ ಕಾರ್ಯಕ್ರಮ ರೂಪಿಸಿ ಜಾರಿಗೊಳಿಸಿದ್ದು ಶ್ಲಾಘನೀಯ ಕಾರ್ಯ’ ಎಂದರು. 

ಈ ವೇಳೆ ನಗರದ ಯಲ್ಲಾಪುರ ನಾಕಾದಿಂದ ನಿಲೇಕಣಿವರೆಗೆ ವಿವಿಧ ಶಾಲಾ ವಿದ್ಯಾರ್ಥಿಗಳು, ಜನಪ್ರತಿನಿಧಿಗಳು, ಸ್ವಯಂ ಸೇವಾ ಸಂಸ್ಥೆಯ ಪ್ರಮುಖರು, ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರು, ಭಾರತ ಸೇವಾದಳ, ಗೃಹ ರಕ್ಷಕ ದಳದ ಸಿಬ್ಬಂದಿ,  ಸಾರ್ವಜನಿಕರು ಮಾನವ ಸರಪಳಿ ನಿರ್ಮಿಸಿ ಬಾಂಧವ್ಯ ಮೆರೆದರು. ಬಿಡ್ಕಿ ಬಯಲಿನ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಲಾಯಿತು. 

ADVERTISEMENT

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಕೆ.ವಿ.ಕಾವ್ಯಾರಾಣಿ, ಡಿಎಸ್ಪಿ ಕೆ.ಎಲ್.ಗಣೇಶ್, ಡಿಎಫ್ಒ ಜಿ.ಆರ್.ಅಜ್ಜಯ್ಯ, ಸಿಪಿಐ ಶಶಿಕಾಂತ ವರ್ಮಾ, ತಹಶೀಲ್ದಾರ್ ಶ್ರೀಧರ ಮುಂದಲಮನಿ, ಪಿಎಸ್ಐ ನಾಗಪ್ಪ ಬಿ, ರತ್ನಾ ಕುರಿ, ಸಮಾಜ ಕಲ್ಯಾಣ ಇಲಾಖೆ ಇಲಾಖೆ ಕೇಶವಮೂರ್ತಿ ಇಮ್ಮಡಿ ಸೇರಿ ಹಲವರು ಭಾಗವಹಿಸಿದ್ದರು. ನಂತರ ನಿಲೇಕಣಿಯ ಹಿರಿಯ ಪ್ರಾಥಮಿಕ ಶಾಲೆ ನಂ.4ರಲ್ಲಿ ವನಮಹೋತ್ಸವ ಕಾರ್ಯಕ್ರಮ ಜರುಗಿತು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.