ADVERTISEMENT

ಪೌರ ಕಾರ್ಮಿಕರ ಪಾದಪೂಜೆ ಮಾಡಿ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2020, 9:02 IST
Last Updated 17 ನವೆಂಬರ್ 2020, 9:02 IST
ನಗರಸಭೆಯ ಅಧ್ಯಕ್ಷ ಗಣಪತಿ ನಾಯ್ಕ ಮತ್ತು ಉಪಾಧ್ಯಕ್ಷೆ ವೀಣಾ ಶೆಟ್ಟಿ ಅವರು ಪೌರಕಾರ್ಮಿಕರಿಗೆ ಪಾದಪೂಜೆ ಮಾಡಿದರು.
ನಗರಸಭೆಯ ಅಧ್ಯಕ್ಷ ಗಣಪತಿ ನಾಯ್ಕ ಮತ್ತು ಉಪಾಧ್ಯಕ್ಷೆ ವೀಣಾ ಶೆಟ್ಟಿ ಅವರು ಪೌರಕಾರ್ಮಿಕರಿಗೆ ಪಾದಪೂಜೆ ಮಾಡಿದರು.   

ಶಿರಸಿ: ಇಲ್ಲಿನ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷೆಯಾಗಿ ಗಣಪತಿ ನಾಯ್ಕ ಮತ್ತು ವೀಣಾ ಶೆಟ್ಟಿ ಮಂಗಳವಾರ ಅಧಿಕಾರ ಸ್ವೀಕರಿಸಿದರು. ಅದಕ್ಕೂ ಮೊದಲು ಅವರಿಬ್ಬರೂ ಪೌರಕಾರ್ಮಿಕರ ಪಾದಪೂಜೆ ಮಾಡಿದರು.

ಪೌರಕಾರ್ಮಿಕರಾದ ಎಂ.ನಂದ್ಯಪ್ಪ ಹಾಗೂ ಸರಸ್ವತಿ ಅವರ ಪಾದ ತೊಳೆದ ಅವರು ಬಳಿಕ ಸನ್ಮಾನಿಸಿದರು. ಆ ನಂತರವೇ ಕಚೇರಿಗೆ ತೆರಳಿ ಅಧಿಕಾರ ಸ್ವೀಕರಿಸಿದರು. ಅ.31 ರಂದು ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT