ADVERTISEMENT

ಶಿರಸಿ: 6 ಅಪರಾಧಿಗಳಿಗೆ 10 ವರ್ಷ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 2:36 IST
Last Updated 5 ಫೆಬ್ರುವರಿ 2026, 2:36 IST
<div class="paragraphs"><p>ಜೈಲು (ಪ್ರಾತಿನಿಧಿಕ ಚಿತ್ರ)</p></div>

ಜೈಲು (ಪ್ರಾತಿನಿಧಿಕ ಚಿತ್ರ)

   

ಶಿರಸಿ: ನಗರದಲ್ಲಿ ನಡೆದಿದ್ದ ಬಿಜೆಪಿ ಮುಖಂಡನ ಕೊಲೆ ಯತ್ನ ಹಾಗೂ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಅರು ಮಂದಿ ಅಪರಾಧಿಗಳಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ಕೋರ್ಟ್ 10 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪುನೀಡಿದೆ.

2019ರ ಏಪ್ರಿಲ್ 29ರಂದು ರಾತ್ರಿ ನಗರದ ಕಸ್ತೂರಬಾನಗರದ ಕರಿ ಗುಂಡಿ ರಸ್ತೆಯಲ್ಲಿ ಅಂದಿನ ಬಿಜೆಪಿ ಸಂಖ್ಯಾತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಅನೀಶ ತಹಶೀಲ್ದಾರ್ ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿ ದಾಳಿ ನಡೆಸಲಾಗಿತ್ತು. ಈ ದಾಳಿಯಲ್ಲಿ ಅನೀಶ್ ಗಾಯಗೊಂಡು ಪಾರಾಗಿದ್ದರು. ಇದೇ ವೇಳೆ ಆರೋಪಿಗಳು ಅಸ್ಲಂ ಸೈಯದ್ ಬಾಬಾಜಾನ್ ಎಂಬಾತನನ್ನು ಹತ್ಯೆಮಾ ಡಿದ್ದರು. ಶಿರಸಿ ಹೊಸ ಮಾರುಕಟ್ಟೆ ಠಾಣೆ ಯಲ್ಲಿ ಪ್ರಕರಣಗಳು ದಾಖಲಾಗಿದ್ದವು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.