ADVERTISEMENT

ಶಿರಸಿ | ಪತ್ರಿಕಾ ದಿನಾಚರಣೆ, ಸನ್ಮಾನ ಜುಲೈ 1ರಂದು 

​ಪ್ರಜಾವಾಣಿ ವಾರ್ತೆ
Published 27 ಜೂನ್ 2025, 14:51 IST
Last Updated 27 ಜೂನ್ 2025, 14:51 IST

ಶಿರಸಿ: ಕಾರ್ಯನಿರತ ಪತ್ರಕರ್ತರ ಸಂಘದ ಉತ್ತರ ಕನ್ನಡ ಜಿಲ್ಲಾ ಘಟಕದ ವತಿಯಿಂದ ಪತ್ರಿಕಾ ದಿನಾಚರಣೆ, ದತ್ತಿನಿಧಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜುಲೈ 1ರಂದು ಬೆಳಿಗ್ಗೆ 11 ಗಂಟೆಗೆ ನಗರದ ಟಿಎಂಎಸ್ ಸಭಾಭವನದಲ್ಲಿ ಆಯೋಜಿಸಲಾಗಿದೆ.

ಹಿರಿಯ ಪತ್ರಕರ್ತ ಮಹಾಬಲ ಸೀತಾಳಬಾವಿ ಕಾರ್ಯಕ್ರಮ ಉದ್ಘಾಟಿಸುವರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಸುಬ್ರಾಯ ಭಟ್ ಬಕ್ಕಳ ಅಧ್ಯಕ್ಷತೆ ವಹಿಸುವರು. ಶಾಸಕ ಭೀಮಣ್ಣ ನಾಯ್ಕ, ಹಿರಿಯ ಹೃದಯ ರೋಗ ತಜ್ಞ ಡಾ.ರಾಜೇಶ ಚಿತ್ತರಂಜನ್, ಡಿವೈಎಸ್ಪಿ ಗೀತಾ ಪಾಟೀಲ ಉಪಸ್ಥಿತರಿರುವರು. 

ಇದೇ ಸಂದರ್ಭದಲ್ಲಿ ಕೆ.ಶಾಮರಾವ್ ದತ್ತಿನಿಧಿ ಪ್ರಶಸ್ತಿಯನ್ನು ಶೈಲಜಾ ಗೋರನಮನೆ ಅವರಿಗೆ, ಡಾ.ಯು .ಚಿತ್ತರಂಜನ್ ದತ್ತಿನಿಧಿ ಪ್ರಶಸ್ತಿಯನ್ನು ಗಣೇಶ ಹೆಗಡೆ ಇಟಗಿ ಅವರಿಗೆ ಹಾಗೂ ಜಿ.ಎಸ್ ಹೆಗಡೆ ಅಜ್ಜೀಬಳ ಪ್ರಶಸ್ತಿಯನ್ನು ದೀಪಕಕುಮಾರ ಶೇಣ್ವಿ ಅವರಿಗೆ ನೀಡಿ ಗೌರವಿಸಲಾಗುವುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸುಮಂಗಲಾ ಹೊನ್ನೆಕೊಪ್ಪ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.