ಶಿರಸಿ ನಗರ ಠಾಣಾ ವ್ಯಾಪ್ತಿಯ ಬನವಾಸಿ ರಸ್ತೆಯಲ್ಲಿ ಪೊಲೀಸರು ರಾಡಾರ್ ಗನ್ ಕಾರ್ಯಾಚರಣೆ ನಡೆಸುತ್ತಿರುವುದು
ಶಿರಸಿ: ನಗರದಲ್ಲಿ ಅತಿ ವೇಗ ಮತ್ತು ನಿರ್ಲಕ್ಷತನದ ವಾಹನ ಚಲಾಯಿಸುವ ಸವಾರರನ್ನು ನಿಯಂತ್ರಿಸಲು ಭಾನುವಾರ ನಗರ ಠಾಣಾ ವ್ಯಾಪ್ತಿಯ ಬನವಾಸಿ ರಸ್ತೆಯಲ್ಲಿ ರಾಡಾರ್ ಗನ್ ಕಾರ್ಯಾಚರಣೆ ಹಮ್ಮಿಕೊಂಡ ಪಿಎಸ್ಐ ನಾಗಪ್ಪ ಬಿ, ಅತಿವೇಗವಾಗಿ ವಾಹನ ಚಲಾಯಿಸುತ್ತಿದ್ದ ಮೂರು ಜನ ವಾಹನ ಸವಾರರ ವಿರುದ್ದ ಭಾರತೀಯ ಮೊಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ ₹3 ಸಾವಿರ ದಂಡ ವಿಧಿಸಿದ್ದಾರೆ.
ಪಿಎಸ್ಐ ನಾಗಪ್ಪ.ಬಿ, ಮಹಾಂತಪ್ಪ ಕುಂಬಾರ ಹಾಗೂ ಹೊಸ ಮಾರುಕಟ್ಟೆ ಠಾಣಾ ಪಿಎಸ್ಐ ರತ್ನಾ ಕುರಿ, ರಾಜಕುಮಾರ ಉಕ್ಕಲಿ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಶಿರಸಿ ನಗರಸಭಾ ವ್ಯಾಪ್ತಿಯಲ್ಲಿ ವಾಹನಗಳ ವೇಗದ ಮಿತಿ ಗಂಟೆಗೆ 40 ಕಿ.ಮೀ ಹಾಗೂ ಮಾರುಕಟ್ಟೆ ಪ್ರದೇಶ ವ್ಯಾಪ್ತಿಯಲ್ಲಿ ಗಂಟೆಗೆ 35 ಕಿ.ಮೀ ನಿಗದಿಪಡಿಸಲಾಗಿದ್ದು, ಅತಿವೇಗ ಮತ್ತು ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವ ಸವಾರರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಡಿಎಸ್ಪಿ ಗಣೇಶ ಕೆ.ಎಲ್ ಎಚ್ಚರಿಕೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.