ಶಿರಸಿ: ಶಿವಲಿಂಗದ ಮೇಲೆ ಚಾಕ್‌ಪೀಸ್‌ನಿಂದ ಇಂಗ್ಲಿಷ್ ಅಕ್ಷರ ಬರೆದು ವಿರೂಪಗೊಳಿಸಿದ ಕಿಡಿಗೇಡಿಗಳು ವಿಕೃತಿ ಮೆರೆದ ಘಟನೆ ತಾಲ್ಲೂಕಿನ ನರಬೈಲ್ ಗ್ರಾಮದ ಸೋಮೇಶ್ವರ ದೇವಸ್ಥಾನದಲ್ಲಿ ಭಾನುವಾರ ನಡೆದಿದೆ.
ಗರ್ಭಗುಡಿಯ ಶಿವಲಿಂಗದ ಮೇಲೆ ಜೆ.ಇ.ಎಸ್ 2024, 2026 ಎಂಬ ಇಂಗ್ಲಿಷ್ ಅಕ್ಷರ ಬರೆಯಲಾಗಿದೆ. ಪೂಜೆಗೆ ಬಂದ ಪುರೋಹಿತರು ಗರ್ಭಗುಡಿಯ ಬಾಗಿಲು ತೆರೆದಾಗ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೇವಸ್ಥಾನದಲ್ಲಿ ಯಾವುದೇ ಕಳವಾಗಿಲ್ಲ, ಯಾರೂ ಇಲ್ಲದ ವೇಳೆ ಈ ರೀತಿ ವಿರೂಪ ಮಾಡಿದ್ದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ ಎನ್ನುತ್ತಾರೆ ಸ್ಥಳೀಕರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.