ADVERTISEMENT

ಬಿಜೆಪಿ ಪರಿವಾರ ಇನ್ನಷ್ಟು ದೊಡ್ಡದಾಗಲಿ: ಕಾಗೇರಿ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2024, 15:48 IST
Last Updated 4 ಸೆಪ್ಟೆಂಬರ್ 2024, 15:48 IST
ಶಿರಸಿಯಲ್ಲಿ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು
ಶಿರಸಿಯಲ್ಲಿ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಿದರು    

ಶಿರಸಿ: ‘ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪರ ಶ್ರಮಿಸಿದಂತೆ ಸದಸ್ಯತ್ವ ಅಭಿಯಾನದ ಸಂದರ್ಭದಲ್ಲೂ ಅದೇ ಉತ್ಸಾಹ ತೋರಬೇಕಿದೆ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು. 

ನಗರದ ದೀನದಯಾಳ ಭವನದಲ್ಲಿ ಬುಧವಾರ ನಡೆದ ಉತ್ತರಕನ್ನಡ ಜಿಲ್ಲೆಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿಯಾದ ನನ್ನ ಗೆಲುವಿನ ಅಂತರ ಮೂರು ಲಕ್ಷಕ್ಕೂ ಮೇಲಿದೆ. ಹೀಗಾಗಿ ಬಿಜೆಪಿ ಸದಸ್ಯತ್ವ ಅಭಿಯಾನದಲ್ಲಿ ಸದಸ್ಯತ್ವದ ಗುರಿ ಕನಿಷ್ಠ 5 ಲಕ್ಷ ತಲುಪುವಂತೆ ಆಗಬೇಕು. ಇದಕ್ಕೆ ಪ್ರತಿ ಮನೆ ಸಂಪರ್ಕ ಆಗಬೇಕು. ಮುಂಬರುವ ದಿನಗಳಲ್ಲಿ ಬಿಜೆಪಿ ಪರಿವಾರ ಇನ್ನಷ್ಟು ದೊಡ್ಡದಾಗಬೇಕು’ ಎಂದರು. 

ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ಮಾತನಾಡಿ, ‘ಜಿಲ್ಲೆಯಲ್ಲಿ ಸದ್ಯ 4 ಲಕ್ಷ ಸದಸ್ಯತ್ವದ ಗುರಿ ಹೊಂದಲಾಗಿದೆ. ಕಾರ್ಯಕರ್ತರ ಉತ್ಸಾಹ ನೋಡಿದರೆ ಗುರಿ ಮೀರಿ ಸಾಧನೆ ತೋರುವ ವಿಶ್ವಾಸವಿದೆ’ ಎಂದರು.

ADVERTISEMENT

ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ವೆಂಕಟೇಶ ನಾಯಕ, ಎಂ.ಜಿ.ನಾಯ್ಕ, ಅಭಿಯಾನ ಸಂಚಾಲಕ ಗುರುಪ್ರಸಾದ ಹೆಗಡೆ ಹರ್ತೆಬೈಲ್, ಜಿಲ್ಲಾ ಕೋರ್ ಕಮಿಟಿ ಸದಸ್ಯರಾದ ಆರ್.ಡಿ.ಹೆಗಡೆ, ಅಭಿಯಾನ ಸಹ ಸಂಚಾಲಕ ನಿತ್ಯಾನಂದ ಗಾಂವ್ಕರ್, ಶಿರಸಿ ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ ಇದ್ದರು. ಪ್ರಶಾಂತ ನಾಯ್ಕ ನಿರ್ವಹಿಸಿದರು. ಶಿವಾಜಿ ನರಸಾನಿ ಸ್ವಾಗತಿಸಿದರು. ಪ್ರೇಮಕುಮಾರ ನಾಯ್ಕ ವಂದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.