ಹಳಿಯಾಳ: ರಾಜ್ಯ ಸರ್ಕಾರ ಹಿಂದೂಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಶಾಸಕ ಆರ್.ವಿ. ದೇಶಪಾಂಡೆ ತಮ್ಮ ನಿವಾಸದಲ್ಲಿ ಸೋಮವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿಗಳ ವಿವರ ಪಡೆದು ಅವಕಾಶ ವಂಚಿತರಿಗೆ ಸಮಾನ ಅವಕಾಶಗಳನ್ನು ನೀಡಲು ರಾಜ್ಯದಲ್ಲಿ ನಡೆಸುತ್ತಿರುವ ಸಮೀಕ್ಷಾ ಕಾರ್ಯಕ್ಕೆ ನಿಯೋಜಿತ ಶಿಕ್ಷಕರು ಮನೆಗಳಿಗೆ ಭೇಟಿ ನೀಡಿದಾಗ ಸೂಕ್ತ ಮಾಹಿತಿ ನೀಡಿ ಹಾಗೂ ಸಮೀಕ್ಷಾ ಕಾರ್ಯ ಯಶಸ್ವಿಗೊಳಿಸಿ. ಸೆ.22ರಿಂದ ಅ.7ರ ವರೆಗೆ ನಡೆಯಲಿದೆ. ಕುಟುಂಬ ಸದಸ್ಯರ ಮಾಹಿತಿಯನ್ನು ನೀಡಿ. ಸಮೀಕ್ಷೆ ಸಮಯದಲ್ಲಿ ಆಧಾರ್ ಕಾರ್ಡ್, ಪಡಿತರ ಚೀಟಿ ಹಾಗೂ ಅವಶ್ಯಕ ದಾಖಲಾತಿ ನೀಡಿ ಸಹಕರಿಸಿ ಎಂದರು.
ತಹಶೀಲ್ದಾರ್ ಪಿರೊಜಷಾ ಸೊಮನಕಟ್ಟಿ, ಪ್ರಮೋದ ಮಹಾಲೆ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.