ADVERTISEMENT

ಜನರ ಸಂಕಷ್ಟಕ್ಕೆ ಸ್ಪಂದಿಸುವುದೇ ಗುರಿ: ಕಾಗೇರಿ

₹4.72 ಕೋಟಿ ವೆಚ್ಚದ ಅಭಿವೃದ್ಧಿ ಯೋಜನೆಗೆ ಚಾಲನೆ ನೀಡಿದ ಶಾಸಕ ಕಾಗೇರಿ

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 6:47 IST
Last Updated 12 ಜನವರಿ 2022, 6:47 IST
ಶಿರಸಿ ತಾಲ್ಲೂಕಿನ ಸಾಲ್ಕಣಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಣದೂರಿನಲ್ಲಿ ಅಂತರ್ಗತ ಕಾಲುವೆ ಸಹಿತ ಕಾಂಕ್ರೀಟ್ ಸೇತುವೆ ಉದ್ಘಾಟಿಸಿದ ಬಳಿಕ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಬಳಿಕ ಸೇತುವೆ ಪರಿಶೀಲಿಸಿದರು
ಶಿರಸಿ ತಾಲ್ಲೂಕಿನ ಸಾಲ್ಕಣಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಣದೂರಿನಲ್ಲಿ ಅಂತರ್ಗತ ಕಾಲುವೆ ಸಹಿತ ಕಾಂಕ್ರೀಟ್ ಸೇತುವೆ ಉದ್ಘಾಟಿಸಿದ ಬಳಿಕ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಬಳಿಕ ಸೇತುವೆ ಪರಿಶೀಲಿಸಿದರು   

ಶಿರಸಿ: ಗ್ರಾಮೀಣ ಭಾಗದಲ್ಲಿ ಮೂಲಸೌಕರ್ಯಗಳನ್ನು ವೃದ್ಧಿಸುವ ಜತೆಗೆ ಜನರ ಸಂಕಷ್ಟಕ್ಕೆ ಸ್ಪಂದಿಸುವ ಗುರಿಯೊಂದಿಗೆ ಕೆಲಸ ಮಾಡಲಾಗುತ್ತಿದೆ ಎಂದು ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ತಾಲ್ಲೂಕಿನ ಸಾಲ್ಕಣಿ, ಮೇಲಿನ ಓಣಿಕೇರಿ, ಹುಲೇಕಲ್ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಂಗಳವಾರ ₹4.72 ಕೋಟಿ ವೆಚ್ಚದಲ್ಲಿ ಕೈಗೊಂಡ ಸೇತುವೆ, ಅಂಗನವಾಡಿ ಕಟ್ಟಡ, ಬಾಂದಾರ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಅವರು ಚಾಲನೆ ನೀಡಿದರು.

‘ಮಣದೂರು ಗ್ರಾಮದಲ್ಲಿ ಹಾದುಹೋದ ರಾಜ್ಯ ಹೆದ್ದಾರಿಯಲ್ಲಿ ಮಳೆಗಾಲದಲ್ಲಿ ನೀರು ನಿಂತು ಸಮಸ್ಯೆ ಉಂಟಾಗುತ್ತಿದ್ದ ಕಾರಣ ಅಲ್ಲಿ ಅಂತರ್ಗತ ಚರಂಡಿ ಸಹಿತ ಸೇತುವೆ ನಿರ್ಮಿಸಲಾಗಿದೆ. ಇದು ಸ್ಥಳೀಯರಿಗಷ್ಟೆ ಅಲ್ಲದೆ ವಾಹನ ಸವಾರರಿಗೆ ಅನುಕೂಲವಾಗಿದೆ’ ಎಂದರು.

ADVERTISEMENT

‘ಪ್ರವಾಸಿತಾಣಗಳಲ್ಲಿ ಮೂಲಸೌಕರ್ಯ ವೃದ್ಧಿಸುವ ಕೆಲಸವಾಗುತ್ತಿದೆ. ಹಳ್ಳಿಗಳಲ್ಲಿ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆಗೆ ಆದ್ಯತೆ ನೀಡಿ ಕೆಲಸ ಮಾಡಲಾಗುತ್ತಿದೆ. ಗ್ರಾಮಾಂತರ ಭಾಗದಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಲು ಅನುಕೂಲವಾಗುವ ನಿಟ್ಟಿನಲ್ಲಿ ಅಗತ್ಯ ಪರಿಕರಗಳನ್ನೂ ಒದಗಿಸಲಾಗುತ್ತಿದೆ’ ಎಂದರು.

‘ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಈ ಹಿಂದೆ ಹೇಳಿಕೆಯಲ್ಲಿ ಕಾಲಕಳೆಯುತ್ತಿದ್ದರು. ನಾನು ಕೆಲಸದಲ್ಲಿ ಮಾಡಿ ತೋರಿಸಿದ್ದೇನೆ. ಜನರ ಬೇಡಿಕೆಗೆ ತಕ್ಕಂತೆ ಅನುದಾನ ಒದಗಿಸಿ, ಅಭಿವೃದ್ಧಿ ಕಾಮಗಾರಿಗಳಿಗೆ ಮಂಜೂರಾತಿ ಒದಗಿಸಿಕೊಡಲಾಗಿದೆ’ ಎಂದು ಕಾಗೇರಿ ಹೇಳಿದರು.

ಪ್ರಮುಖರಾದ ಜಿ.ಎನ್.ಹೆಗಡೆ ಮುರೇಗಾರ, ನರಸಿಂಹ ಹೆಗಡೆ ಬಕ್ಕಳ, ಎನ್.ಎಸ್.ಭಟ್ ಮಣದೂರು, ಪಿಡಬ್ಲ್ಯುಡಿ ಇಇ ಕೃಷ್ಣಾ ರೆಡ್ಡಿ, ಎಇಇ ಉಮೇಶ ನಾಯ್ಕ, ಶಿಶು ಅಭಿವೃದ್ಧಿ ಅಧಿಕಾರಿ ದತ್ತಾತ್ರೇಯ ಭಟ್, ಪಿ.ಆರ್.ಇ.ಡಿ. ಎಇಇ ರಮಚಂದ್ರ ಗಾಂವಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.