ADVERTISEMENT

ಸಿ.ಎಸ್.ಟಿ– ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲು

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2022, 15:29 IST
Last Updated 3 ಡಿಸೆಂಬರ್ 2022, 15:29 IST

ಕಾರವಾರ: ಚಳಿಗಾಲದ ಅವಧಿಯಲ್ಲಿ ಪ್ರಯಾಣಿಕರ ದಟ್ಟಣೆ ನಿಭಾಯಿಸುವ ನಿಟ್ಟಿನಲ್ಲಿ ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ – ಮಂಗಳೂರು ಜಂಕ್ಷನ್ ನಡುವೆ ವಿಶೇಷ ರೈಲು ಸಂಚಾರವನ್ನು ಕೊಂಕಣ ರೈಲ್ವೆ ಪ್ರಕಟಿಸಿದೆ.

01453 ಸಂಖ್ಯೆಯ ರೈಲುಲೋಕಮಾನ್ಯ ತಿಲಕ್ ಟರ್ಮಿನಸ್‌ನಿಂದ ಡಿ.9ರಿಂದ ಜ.6ರ ತನಕ ಪ್ರತಿ ಶುಕ್ರವಾರ ರಾತ್ರಿ 10.15ಕ್ಕೆ ಹೊರಡಲಿದೆ. ಮರುದಿನ ಸಂಜೆ 5.05ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. 01454 ಸಂಖ್ಯೆಯ ರೈಲು ಮಂಗಳೂರು ಜಂಕ್ಷನ್‌ನಿಂದ ಡಿ.10ರಿಂದ ಜ.7ರ ತನಕ ಪ್ರತಿ ಶನಿವಾರ ಸಂಜೆ 6.45ಕ್ಕೆ ಪ್ರಯಾಣ ಆರಂಭಿಸಲಿದೆ. ಮರುದಿನ ಸಂಜೆ 4.25ಕ್ಕೆ ಲೋಕಮಾನ್ಯ ತಿಲಕ್ ಟರ್ಮಿನಸ್ ತಲುಪಲಿದೆ.

ಈ ರೈಲಿಗೆ ಕಾರವಾರ, ಗೋಕರ್ಣ ರಸ್ತೆ, ಕುಮಟಾ, ಮುರುಡೇಶ್ವರ, ಭಟ್ಕಳ, ಮೂಕಾಂಬಿಕಾ ರಸ್ತೆ ಬೈಂದೂರು, ಕುಂದಾಪುರ, ಉಡುಪಿ, ಮುಲ್ಕಿ ಮತ್ತು ಸುರತ್ಕಲ್‌ನಲ್ಲಿ ನಿಲುಗಡೆಯಿದೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.