ADVERTISEMENT

ಯಶವಂತಪುರ– ಮುರುಡೇಶ್ವರ ನಡುವೆ ವಿಶೇಷ ರೈಲು

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2022, 15:57 IST
Last Updated 29 ಸೆಪ್ಟೆಂಬರ್ 2022, 15:57 IST

ಕಾರವಾರ: ಹಬ್ಬದ ವಿಶೇಷ ಸಂದರ್ಭದಲ್ಲಿ ಯಶವಂತಪುರ– ಮುರುಡೇಶ್ವರ– ಯಶವಂತಪುರ ನಡುವೆ ವಿಶೇಷ ರೈಲು ಸಂಚಾರವನ್ನು ನೈರುತ್ಯ ರೈಲ್ವೆ ಪ್ರಕಟಿಸಿದೆ.

ಅ.1ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಡುವ ರೈಲು (ಸಂಖ್ಯೆ 06563), ಮರುದಿನ ಮಧ್ಯಾಹ್ನ 12.55ಕ್ಕೆ ಮುರುಡೇಶ್ವರ ತಲುಪಲಿದೆ. ಅ.2ರಂದು ಮಧ್ಯಾಹ್ನ 1.30ಕ್ಕೆ ಹೊರಡುವ ರೈಲು (ಸಂಖ್ಯೆ 06564) ಮರುದಿನ ಸಂಜೆ 4ಕ್ಕೆ ಯಶವಂತಪುರ ತಲುಪಲಿದೆ.

ಈ ರೈಲಿಗೆ ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು ಮತ್ತು ಭಟ್ಕಳದಲ್ಲಿ ನಿಲುಗಡೆಯಿದೆ. ಪ್ರಯಾಣಿಕರು ಸೆ.30ರಿಂದ ಟಿಕೆಟ್ ಮುಂಗಡ ಕಾಯ್ದಿರಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.