ADVERTISEMENT

ಸಾಧನೆಗೈದ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ ನೀಡಲು, ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2025, 8:52 IST
Last Updated 31 ಡಿಸೆಂಬರ್ 2025, 8:52 IST
Anup Ragh. T.
   Anup Ragh. T.

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ 2024–25ನೇ ಸಾಲಿನಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಮಾಧ್ಯಮಿಕ, ಫ್ರೌಡ ಶಾಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಅರ್ಹ ಕ್ರೀಡಾ ಪಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಹಾಗೂ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದ್ದಲ್ಲಿ ಅಂತಹ ಕ್ರೀಡಾ ಪಟುಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಜ.13 ಕೊನೆಯ ದಿನವಾಗಿದೆ. ಅರ್ಜಿಯನ್ನು ಕಾರವಾರದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಗೆ ಸಲ್ಲಿಸಬಹುದು. ಅಗತ್ಯ ಮಾಹಿತಿಗೆ 08382 201824 ಅಥವಾ 9480886551 ಸಂಪರ್ಕಿಸಬಹುದು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT