ಹಳಿಯಾಳ: ಇಲ್ಲಿನ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ (ಮಾರ್ಕೆಟಿಂಗ್ ಸೊಸೈಟಿಯ ) ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶ್ರೀನಿವಾಸ ಘೋಟ್ನೇಕರ ಹಾಗೂ ಉಪಾಧ್ಯಕ್ಷರಾಗಿ ಹರಿದಾಸ ಬೋಬ್ಲಿ ಅವಿರೋಧವಾಗಿ ಆಯ್ಕೆಯಾದರು.
ಶುಕ್ರವಾರ ಸಹಕಾರ ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯಲ್ಲಿ ಸರ್ವಾನುಮತದಿಂದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯನ್ನು ಚುನಾವಣಾಧಿಕಾರಿ ಘೋಷಿಸಿದರು.
ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಶ್ರೀನಿವಾಸ ಘೋಟ್ನೇಕರ ಮಾತನಾಡಿ, ‘ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಎಸ್.ಎಲ್.ಘೋಟ್ನೇಕರ , ಮಾಜಿ ಶಾಸಕ ಸುನೀಲ ಹೆಗಡೆ ಮಾರ್ಗದರ್ಶನದಲ್ಲಿ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸೊಸೈಟಿಯ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವೆ’ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಲ್.ಘೋಟ್ನೇಕರ, ಮಾಜಿ ಶಾಸಕ ಸುನೀಲ ಹೆಗಡೆ ಮಾತನಾಡಿ, ‘ಸೊಸೈಟಿ ಪ್ರಗತಿಗಾಗಿ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ನಿರ್ವಹಿಸಿ ಹಾಗೂ ರೈತರ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ’ ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಮತ್ತಿತರ ಸೊಸೈಟಿ ನಿರ್ದೇಶಕರು, ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.