ಭಟ್ಕಳ: ತಾಲ್ಲೂಕಿನ ಜಾಲಿ ಸರ್ಕಾರಿ ಪ್ರೌಢಶಾಲೆ 3ನೇ ಬಾರಿಗೆ ಶೇ 100 ಫಲಿತಾಂಶ ದಾಖಲಿಸಿದ್ದು, ಪರೀಕ್ಷೆಗೆ ಕುಳಿತ 21 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
21 ವಿದ್ಯಾರ್ಥಿಗಳಲ್ಲಿ 9 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 11 ವಿದ್ಯಾರ್ಥಿಗಳು ಪ್ರಥಮ ದರ್ಜೆ ಮತ್ತು ಒಬ್ಬ ವಿದ್ಯಾರ್ಥಿ ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ತೃಪ್ತಿ ಜಟ್ಟ ನಾಯ್ಕ (ಶೇ 96.8) ಶಾಲೆಗೆ ಪ್ರಥಮ, ಧನಶ್ರೀ ಈರಯ್ಯ ಗೊಂಡ (ಶೇ 95.52)ದ್ವಿತೀಯ ಮತ್ತು ಕೌಶಿಕ್ ಕುಪ್ಪಯ್ಯ ನಾಯ್ಕ (ಶೇ 95.2) ತೃತೀಯ ಸ್ಥಾನ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.