ಎಸ್.ಎಸ್.ಎಲ್.ಸಿ ಫಲಿತಾಂಶ ವೀಕ್ಷಣೆ.. (ಸಾಂದರ್ಭಿಕ ಚಿತ್ರ)
ಕಾರವಾರ: ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ಉತ್ತರ ಕನ್ನಡ ಜಿಲ್ಲೆ ಮೂರನೇ ಸ್ಥಾನಕ್ಕೆ ಏರಿದೆ.
2024ನೇ ಸಾಲಿನಲ್ಲಿ ಜಿಲ್ಲೆಯು 5ನೇ ಸ್ಥಾನ ಗಳಿಸಿತ್ತು. ಒಟ್ಟು ಶೇ 83.19 ಫಲಿತಾಂಶ ಸಾಧನೆಯೊಂದಿಗೆ ಎರಡು ಸ್ಥಾನ ಮೇಲಕ್ಕೇರಿದೆ.
ಪರೀಕ್ಷೆಗೆ ಕುಳಿತಿದ್ದ 8,890 ವಿದ್ಯಾರ್ಥಿಗಳ ಪೈಕಿ 7,396 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 'ಫಲಿತಾಂಶ ಸುಧಾರಣೆಗೆ ಕೈಗೊಂಡಿದ್ದ ಪ್ರೇರಣಾ ಶಿಬಿರ, ಕಲಿಕೆಯಲ್ಲಿ ಹಿಂದುಳಿದವರಿಗೆ ವಿಶೇಷ ತರಗತಿ ನಡೆಸಿ, ಅಧ್ಯಯನಕ್ಕೆ ಒತ್ತು ನೀಡಿದ್ದು ಸ್ಥಾನ ಏರಿಕೆಗೆ ಮೆರವಾಯಿತು' ಎಂದು ಡಿಡಿಪಿಐ ಲತಾ ನಾಯಕ ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.