ADVERTISEMENT

ರಾಜ್ಯಮಟ್ಟದ ಚಿಂತನಕೂಟ 4ಕ್ಕೆ: ರವೀಂದ್ರ

​ಪ್ರಜಾವಾಣಿ ವಾರ್ತೆ
Published 1 ಜೂನ್ 2022, 13:43 IST
Last Updated 1 ಜೂನ್ 2022, 13:43 IST
ರವೀಂದ್ರ ನಾಯ್ಕ
ರವೀಂದ್ರ ನಾಯ್ಕ   

ಶಿರಸಿ: ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಆಶ್ರಯದಲ್ಲಿ ಜೂನ್ 4ರ ಶನಿವಾರ ಮಧ್ಯಾಹ್ನ 3.30ಕ್ಕೆ ರಾಘವೇಂದ್ರ ಕಲ್ಯಾಣ ಮಂಟಪ ಸಭಾಂಗಣದಲ್ಲಿ ‘ರಾಜ್ಯಮಟ್ಟದ ಅರಣ್ಯ ಭೂಮಿ ಹಕ್ಕು-ಸುಪ್ರಿಂ ಕೋರ್ಟ್ ವಿಚಾರಣೆ’ ಚಿಂತನ ಕೂಟ ಸಂಘಟಿಸಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

ಪತ್ರಿಕಾ ಹೇಳಿಕೆ ನೀಡಿರುವ ಅವರು ‘ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನದಾಸ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಸಂಬಂಧಿಸಿ ಸುಪ್ರಿಂಕೋರ್ಟ್‍ನಲ್ಲಿ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯ ಅಂತಿಮ ವಿಚಾರಣೆ ಜುಲೈನಲ್ಲಿ ಜರಗಲಿದೆ. ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಅಂತಿಮ ತೀರ್ಮಾನ ಹೊರಹೊಮ್ಮಲಿರುವುದರಿಂದ ರಾಜ್ಯಮಟ್ಟದ ಕಾನೂನು ತಜ್ಞರಿಂದ ಚಿಂತನ ಕೂಟ ಆಯೋಜಿಸುತ್ತಿದ್ದೇವೆ’ ಎಂದರು.

‘ಅರಣ್ಯ ಹಕ್ಕು ಕಾಯ್ದೆಯಲ್ಲಿ ಅರ್ಜಿ ತಿರಸ್ಕೃತವಾದ ಅರಣ್ಯ ಅತಿಕ್ರಮಣದಾರರನ್ನ ಒಕ್ಕಲೆಬ್ಬಿಸಿ, ಅರಣ್ಯೀಕರಣ ಮಾಡಬೇಕು ಎಂಬ 8 ಪರಿಸರ ಸಂಘಟನೆಗಳು ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಸುಪ್ರಿಂ ಕೋರ್ಟ್ ಮುಂದಿನ ತಿಂಗಳು ವಿಚಾರಣೆ ನಡೆಸಲಿದೆ. ರಾಜ್ಯ ಸರ್ಕಾರ ಅತಿಕ್ರಮಣದಾರರನ್ನ ಒಕ್ಕಲೆಬ್ಬಿಸುವುದಾಗಿ ಕೋರ್ಟ್‍ಗೆ ಪ್ರಮಾಣಪತ್ರ ಸಲ್ಲಿಸಿದೆ. ಹೋರಾಟಗಾರರ ವೇದಿಕೆಯು ಅರಣ್ಯವಾಸಿಗಳ ಪರವಾಗಿ ವಾದಮಂಡಿಸಲು ಅರ್ಜಿ ಸಲ್ಲಿಸಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.