ಹಳಿಯಾಳ: ‘ಮಕ್ಕಳ ಶೈಕ್ಷಣಿಕ ಮತ್ತು ಭೌದ್ದಿಕ ಬೆಳವಣಿಗೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದು.ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಗೆ ಶಿಕ್ಷಕರು ಕಾರ್ಯ ನಿರ್ವಹಿಸಬೇಕು’ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದ ಮಹಾಲೆ ಹೇಳಿದರು.
ಪಟ್ಟಣದ ಕಾರ್ಮೆಲ್ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರತಿಯೊಬ್ಬ ಶಿಕ್ಷಕ ತಮ್ಮ ವೃತ್ತಿಯನ್ನು ಪ್ರೀತಿಸುವ ಮೂಲಕ ಶ್ರೇಷ್ಠತೆ ಪಡೆದುಕೊಳ್ಳಬೇಕು’ ಎಂದರು.
ದಾಂಡೇಲಿ ನಗರಸಭೆಯ ಅಧ್ಯಕ್ಷ ಅಸ್ಪಾಕ್ ಶೇಖ ಕಾರ್ಯಕ್ರ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಉತ್ತಮ ಶಿಕ್ಷಕರು ಮತ್ತು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಪುರಸಭೆ ಅಧ್ಯಕ್ಷ ದ್ರೌಪದಿ ಅಗಸರ,ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್.ವಾಸರೆ, ಮೋಹನ್ ಹಲವಾಯಿ, ದಾಂಡೇಲಿ ಕಾಗದ ಕಾರ್ಖಾನೆಯ ಮುಖ್ಯಸ್ಥ ರಾಜೇಶ್ ತಿವಾರಿ, ವಿವಿಧ ಶಿಕ್ಷಕರ ಸಂಘದ ಅಧ್ಯಕ್ಷರು ಪದಾದಿಕಾರಿಗಳು ಶಿಕ್ಷಕರ ನೌಕರರ ಸಂಘದ ಅಧ್ಯಕ್ಷರು ಸದಸ್ಯರು ಮತ್ತಿತರರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.