ಭಟ್ಕಳ: ಇಲ್ಲಿನ ಪುರವರ್ಗ ಸಮೀಪದ ಬೇಹಳ್ಳಿ ಹೊಳೆಯಲ್ಲಿ ಬಿದ್ದಿದ್ದ ತೆಂಗಿನಕಾಯಿಯನ್ನು ತೆಗೆಯಲು ಹೋದ ವಿದ್ಯಾರ್ಥಿಯೊಬ್ಬ ಆಕಸ್ಮಿಕವಾಗಿ ಕಾಲುಜಾರಿ ಬಿದ್ದುಗುರುವಾರ ಮೃತಪಟ್ಟಿದ್ದಾನೆ.
ಪಟ್ಟಣದ ಮಗ್ದೂಂ ಕಾಲೊನಿ ನಿವಾಸಿ ಅಹಮ್ಮದ್ ರುವೇಜ್ ಕರೀಮಿ ಮೃತ ವಿದ್ಯಾರ್ಥಿ.ಇಲ್ಲಿನ ಆನಂದಾಶ್ರಮ ಕಾಲೇಜಿನಲ್ಲಿ ಪ್ರಥಮ ಪಿ.ಯು ವಾಣಿಜ್ಯ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದ. ಆತ ಮುಗಳಿಹೊಂಡದಲ್ಲಿರುವ ತನ್ನ ಅಜ್ಜಿಯ ಮನೆಗೆ ಬಂದಾಗ ಈ ದುರ್ಘಟನೆ ನಡೆದಿದೆ.
ಕೂಡಲೇ ಸ್ಥಳೀಯರು ಆತನನ್ನು ಮೇಲಕ್ಕೆ ತಂದು ಆಸ್ಪತ್ರೆಗೆ ಸಾಗಿಸಿದರು. ಆದರೆ, ಆತ ಅಷ್ಟರಲ್ಲಿ ಮೃತಪಟ್ಟಿದ್ದ. ಈ ಕುರಿತು ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.