ಶಿರಸಿ: ತಾಲ್ಲೂಕು ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ ಕಾರ್ಯ ವ್ಯಾಪ್ತಿಯಲ್ಲಿ ಬರುವ ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಬುಧವಾರ ಉಪವಿಭಾಗಾಧಿಕಾರಿ ಕೆ.ವಿ.ಕಾವ್ಯಾರಾಣಿ ಭೇಟಿ ನೀಡಿ ಸ್ವಚ್ಛತೆ, ಮೂಲ ಸೌಕರ್ಯ ವ್ಯವಸ್ಥೆ ಪರಿಶೀಲಿಸಿದರು.
ಈ ವೇಳೆ ವಿದ್ಯಾರ್ಥಿಗಳ ಬಳಿ ಕುಂದು ಕೊರತೆಗಳನ್ನು ವಿಚಾರಿಸಿ, ಸಮಸ್ಯೆಗಳ ಬಗ್ಗೆ ಆಲಿಸಿದರು. ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಸೂಕ್ತ ಕ್ರಮವಹಿಸಿಲು ಇಲಾಖೆ ಅಧಿಕಾರಿಗೆ ಹಾಗೂ ವಿದ್ಯಾರ್ಥಿ ನಿಲಯದ ಮುಖ್ಯಸ್ಥರಿಗೆ ಸೂಚಿಸಿದರು.
ಇದೇ ವೇಳೆ ವಸತಿ ನಿಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಬಿಳ್ಕೊಡಗೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ವಿದ್ಯೆಯನ್ನು ಕಲಿತು ಜೀವನವನ್ನು ರೂಪಿಸಿಕೊಳ್ಳಲು ಸೂಚಿಸಿದರು. ಅಮೂಲ್ಯವಾದ ಜೀವನವನ್ನು ಹಾಳು ಮಾಡಿಕೊಳ್ಳದೇ ತಮ್ಮ ಜೀವನವನ್ನು ರೂಪಿಸಿಕೊಂಡು ವಿವಿಧ ಕ್ಷೇತ್ರಗಳಲ್ಲಿ ಉನ್ನತವಾದ ಹುದ್ದೆಯಲ್ಲಿ ನಡೆಯುವ ಹಾಗೂ ಗುರಿಯನ್ನು ಸಾಧಿಸುವಂತೆ ಹೇಳಿದರು.
ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.