ADVERTISEMENT

ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ: ಸುಜನ್‌ ನಾಯ್ಕಗೆ ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 24 ಜೂನ್ 2025, 13:39 IST
Last Updated 24 ಜೂನ್ 2025, 13:39 IST
ಭಟ್ಕಳದ ಸುಜನ್‌ ನಾಯ್ಕ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು
ಭಟ್ಕಳದ ಸುಜನ್‌ ನಾಯ್ಕ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು   

ಭಟ್ಕಳ: ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರದಲ್ಲಿ ಈಚೆಗೆ ನಡೆದ ರಾಜ್ಯಮಟ್ಟದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರದಲ್ಲಿ ಪತ್ರಕರ್ತ ಮನಮೋಹನ ನಾಯ್ಕ ಅವರ ಪುತ್ರ ಸುಜನ್ ನಾಯ್ಕ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ದ್ವಿತೀಯ ಪಿ.ಯು. ಪರೀಕ್ಷೆಯಲ್ಲಿ ಶೇ 95ಕ್ಕಿಂತ ಹೆಚ್ಚು ಅಂಕ ಪಡೆದ ಸುಜನ್ ಮನಮೋಹನ ನಾಯ್ಕ ಅವರನ್ನು ರಾಜ್ಯ ಪಶುಸಂಗೋಪನಾ ಇಲಾಖೆಯ ಸಚಿವ ಕೆ. ವೆಂಕಟೇಶ ಅವರು ಗೌರವಿಸಿದರು.

ಕಾರ್ಯನಿರತ ಪತ್ರಕರ್ತ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು, ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ, ಸಾಲೂರು ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.