
ಪ್ರಜಾವಾಣಿ ವಾರ್ತೆ
ಕಾರವಾರ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಜಾನಪದ ಗಾಯಕಿ ಸುಕ್ರಿ ಬೊಮ್ಮುಗೌಡ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಅವರನ್ನು ನಗರದ ಜಿಲ್ಲಾ ಆಸ್ಪತ್ರೆಯಿಂದ ಮಂಗಳವಾರ ಮನೆಗೆ ಕಳುಹಿಸಿಕೊಡಲಾಯಿತು.
ಸೆ.12ರಂದು ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಜಿಲ್ಲಾ ಆಸ್ಪತ್ರೆಗೆಕರೆದುಕೊಂಡು ಬಂದಿದ್ದರು. ಆರೋಗ್ಯ ಪರಿಶೀಲಿಸಿದ ವೈದ್ಯರು, ಮಂಗಳವಾರದವರೆಗೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿದರು. ಗುಣಮುಖರಾದಅವರನ್ನುಅಂಕೋಲಾ ತಾಲ್ಲೂಕಿನ ಬಡಿಗೇರಿಯಲ್ಲಿರುವ ಮನೆಗೆ ಕರೆದುಕೊಂಡು ಹೋಗಲಾಯಿತು.
83 ವರ್ಷದ ಸುಕ್ರಜ್ಜಿ, ಜುಲೈ 5ರಂದು ಕೂಡ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಐದು ದಿನ ಚಿಕಿತ್ಸೆ ಪಡೆದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.