ಕಾರವಾರ: ‘ಬಹುಕಾಲದಿಂದ ಜನತೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಬೇಡಿಕೆ ಮಂಡಿಸುತ್ತಿದ್ದರೂ ರಾಜ್ಯದ ಕಾಂಗ್ರೆಸ್ ಸರ್ಕಾರ ಸದ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸಾಧ್ಯವಿಲ್ಲ ಎಂದು ಪ್ರಸ್ತಾವನೆಯನ್ನು ಮುಂದೂಡಿ, ಬಿಜೆಪಿ ಸರ್ಕಾರ ಕೊಟ್ಟಿದ್ದನ್ನೂ ಕಸಿದುಕೊಳ್ಳುವ ಮೂಲಕ ಇಲ್ಲಿನ ಜನರ ಜೀವದ ಜೊತೆ ಚೆಲ್ಲಾಟ ಆಡುತ್ತಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಆರೋಪಿಸಿದ್ದಾರೆ.
‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಶಾಸಕಳಾಗಿದ್ದಾಗ ಸತತ ಪ್ರಯತ್ನ ನಡೆಸಿದ್ದೆ. ಅಂದಿನ ಬಿಜೆಪಿ ಸರ್ಕಾರ ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಜೊತೆಗೆ ಕಾರವಾರದ ಕ್ರಿಮ್ಸ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಸೌಲಭ್ಯ ಕಲ್ಪಿಸುವುದಾಗಿ ಘೋಷಿಸಿತ್ತು. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಆಸ್ಪತ್ರೆ ನಿರ್ಮಿಸುವ ಬಿಜೆಪಿ ಸರ್ಕಾರದ ಜನೋಪಕಾರಿ ಕ್ರಮವನ್ನು ಕೈಬಿಟ್ಟಿದೆ’ ಎಂದು ದೂರಿದ್ದಾರೆ.
‘ಹೃದ್ರೋ, ನರರೋಗ, ಅಪಘಾತದಲ್ಲಿ ತೀವ್ರ ಗಾಯಗೊಂಡವರಿಗೆ ಹೆಚ್ಚಿನ ಆಸ್ಪತ್ರೆ ಸೌಲಭ್ಯಕ್ಕಾಗಿ ದೂರದ ಉಡುಪಿ, ಮಂಗಳೂರು, ಹುಬ್ಬಳ್ಳಿ ಹಾಗೂ ನೆರೆಯ ರಾಜ್ಯ ಗೋವಾ ಆಸ್ಪತ್ರೆಗೆ ಹೋಗುವ ಅನಿವಾರ್ಯ ಇದೆ. 7 ತಜ್ಞ ವೈದ್ಯರ ಹುದ್ದೆಗಳನ್ನೂ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಜೂರು ಮಾಡಲಾಗಿತ್ತು. ಆ ಹುದ್ದೆಗೆ ನೇಮಕಾತಿ ಮಾಡಲೂ ಕಾಂಗ್ರೆಸ್ ಸರ್ಕಾರ ಮುಂದಾಗಿಲ್ಲ’ ಎಂದು ಪತ್ರಿಕಾ ಹೇಳಿಕೆಯಲ್ಲಿ ದೂರಿದ್ದಾರೆ.
‘ರಾಜ್ಯದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣವಾಗಿದೆ. ಸಮಾಜ ಘಾತುಕ ಕೆಲಸಗಳಿಗೆ ಉತ್ತೇಜನ ನೀಡುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ’ ಎಂದು ಆರೋಪಿಸಿದ್ದಾರೆ.
ಅಧಿಕಾರಕ್ಕೆ ಬಂದು 2 ವರ್ಷವಾದರೂ ಜಿಲ್ಲೆಯಲ್ಲಿನ ಆಡಳಿತ ಪಕ್ಷದ ಸಚಿವ ಶಾಸಕರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನ ಮಾಡಿಲ್ಲರೂಪಾಲಿ ನಾಯ್ಕ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.