ಹಳಿಯಾಳದ ತಹಶೀಲ್ದಾರ ಕಾರ್ಯಾಲಯದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ರವರ ಜಯಂತಿ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾದ ಸ್ವಚ್ಚತಾ ಕಾರ್ಯಕ್ರಮದಲ್ಲಿ ಶಾಸಕ ಆರ್.ವಿ.ದೇಶಪಾಂಡೆ ಶ್ರಮದಾನ ಮೂಲಕ ಸ್ವಚ್ಚತಾ ಕಾರ್ಯದಲ್ಲಿ ಪಾಲ್ಗೋಂಡರು. ಪುರಸಭೆ ಅಧ್ಯಕ್ಷೆ ದ್ರೌಪದಿ ಅಗಸರ ಮತ್ತಿತರರು ಪಾಲ್ಗೊಂಡಿದ್ದರು.
ಹಳಿಯಾಳ: ಮಹಾತ್ಮ ಗಾಂಧೀಜಿಯವರ ನ್ಯಾಯ ಮತ್ತು ಸತ್ಯಕ್ಕಾಗಿ ನಡೆಸಿದ ಹೋರಾಟವನ್ನು ಸ್ಮರಿಸಿ ಯುವ ಜನಾಂಗ ಜಾಗೃತರಾಗಬೇಕೆಂದು ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು.
ಇಲ್ಲಿನ ತಹಶೀಲ್ದಾರ್ ಕಾರ್ಯಾ ಲಯದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.
ಗಾಂಧೀಜಿಯವರ ತತ್ವದಂತೆ ಅಸ್ಪೃಶ್ಯತೆ ನಿರ್ಮೂಲನೆ, ಸ್ವಚ್ಛತೆ, ಶ್ರಮದಾನ ನಿರಂತರವಾಗಿ ನಡೆಸಲು ಎಲ್ಲರೂ ಪಣತೊಡಬೇಕು. ರಾಷ್ಟ್ರ ನಾಯಕರ ಪರಿಚಯಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳ ಬೇಕು ಎಂದರು.
‘ಭಾರತದ 2ನೇ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿಯವರು ಕಲೆ, ಸಂಸ್ಕೃತಿ, ವಿವಿಧ ಧಾರ್ಮಿಕ ನಂಬಿಕೆಗಳನ್ನು ಗೌರವಿಸುತ್ತಾ ಸರಳ ಜೀವನ ಶೈಲಿ, ನಿಷ್ಠೆ, ಪ್ರಾಮಾಣಿಕತೆಯಿಂದ ಸತ್ಯದ ದಾರಿಯಲ್ಲಿ ಹೆಜ್ಜೆ ಹಾಕಿದವರು. ಅವರ ಆದರ್ಶ ಗುಣಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳಿ’ ಎಂದರು.
ಸುಮಾ ಹಡಪದ, ಕಿರಣ ಜಕಲಿ, ಬಸವರಾಜ ಹಡಪದ, ಮಂಜುಳಾ ತಂಡದವರಿಂದ ಗಾಂಧೀಜಿಯವರ ಕುರಿತು ದೇಶಭಕ್ತಿ ಗೀತೆಯನ್ನು ಸಾದರ ಪಡಿಸಲಾಯಿತು.
ಪುರಸಭೆ ಅಧ್ಯಕ್ಷೆ ದ್ರೌಪದಿ ಅಗಸರ, ತಹಶೀಲ್ದಾರ ಪಿರೋಜಷಾ ಸೋಮನಕಟ್ಟಿ, ರಮೇಶ ಪಾಟೀಲ, ಪುರಸಭೆಯ ಸದಸ್ಯರು ವಿವಿಧ ಇಲಾಖೆಯ ಇಲಾಖಾಧಿಕಾರಿಗಳು ಇದ್ದರು.
ತಹಶೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ನಡೆದ ಶ್ರಮದಾನ, ಸ್ವಚ್ಚತೆ ಕಾರ್ಯಕ್ರಮದಲ್ಲಿ ಶಾಸಕ ಆರ್.ವಿ.ದೇಶಪಾಂಡೆ, ವಿವಿಧ ಇಲಾಖಾಧಿಕಾರಿಗಳು ಪುರಸಭೆಯ ಸದಸ್ಯರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.