ಕಾರವಾರ: ‘ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಬಿಟ್ಟು ಹೋದರೆ ಮಾತ್ರ ಮನುಕುಲದ ಉಳಿವು ಸಾಧ್ಯವಾಗಲಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ದಿವ್ಯಶ್ರಿ ಸಿ.ಎಂ. ಹೇಳಿದರು.
ಪ್ಲಾಸ್ಟಿಕ್ ಫಾರ್ ಚೇಂಜ್ ಸಂಸ್ಥೆಯು ಗಾರ್ನಿಯರ್ ಕಂಪನಿಯ ಪ್ರಾಯೋಜಕತ್ವದೊಂದಿಗೆ ಜಿಲ್ಲೆಯ ವಿವಿಧ ಕಡಲತೀರಗಳಲ್ಲಿ ಸ್ವಚ್ಛತೆ ಶ್ರಮದಾನ ನಡೆಸುವ ಅಭಿಯಾನಕ್ಕೆ ಈಚೆಗೆ ಇಲ್ಲಿನ ಟ್ಯಾಗೋರ್ ಕಡಲತೀರದಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.
‘ಪರಿಸರದ ನೈರ್ಮಲ್ಯ ಕಾಪಾಡಿಕೊಳ್ಳುವುದು ಪ್ರತಿಯೊಬ್ಬರ ಹೊಣೆ. ಪರಿಸರ ಸ್ವಚ್ಛತೆಗೆ ಗಮನ ಕೊಡಬೇಕು’ ಎಂದರು.
ಸರ್ಕಾರಿ ಪದವಿ ಕಾಲೇಜಿನ ಎನ್‍ಎಸ್‍ಎಸ್ ಘಟಕದ ವಿದ್ಯಾರ್ಥಿಗಳು, ನಗರಸಭೆ ಸದಸ್ಯರು, ಪತಂಜಲಿ ಯೋಗ ಸಮಿತಿ ಸದಸ್ಯರು ಸೇರಿದಂತೆ 100ಕ್ಕೂ ಹೆಚ್ಚು ಜನ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಸುಮಾರು 500 ಕೆ.ಜಿಗೂ ಹೆಚ್ಚು ತ್ಯಾಜ್ಯವನ್ನು ಸಂಗ್ರಹಿಸಿ, ವಿಲೇವಾರಿ ಮಾಡಲಾಯಿತು.
ಕುಮಟಾದ ವನ್ನಳ್ಳಿ ಕಡಲತೀರ, ಗೋಕರ್ಣದ ಮುಖ್ಯ ಕಡಲತೀರ, ಹೊನ್ನಾವರದ ಕಾಸರಕೋಡಿನ ಇಕೋ ಕಡಲತೀರದಲ್ಲಿಯೂ ಶ್ರಮದಾನ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.