ADVERTISEMENT

ಅರಣ್ಯವಾಸಿಗಳಿಗೆ ತೊಂದರೆಯಾಗದಂತೆ ಕ್ರಮವಹಿಸಿ:ಆಳ್ವಾ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2022, 16:24 IST
Last Updated 4 ಮಾರ್ಚ್ 2022, 16:24 IST
ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅವರು 30 ವರ್ಷಗಳ ಹೋರಾಟದ ಕುರಿತ ಸ್ಮರಣ ಸಂಚಿಕೆಯನ್ನು ಮಾರ್ಗರೇಟ್ ಆಳ್ವಾ ಅವರಿಗೆ ನೀಡಿದರು
ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅವರು 30 ವರ್ಷಗಳ ಹೋರಾಟದ ಕುರಿತ ಸ್ಮರಣ ಸಂಚಿಕೆಯನ್ನು ಮಾರ್ಗರೇಟ್ ಆಳ್ವಾ ಅವರಿಗೆ ನೀಡಿದರು   

ಶಿರಸಿ: ಸುಪ್ರಿಂ ಕೋರ್ಟ್‍ನಲ್ಲಿ ವಿಚಾರಣಾ ಹಂತದಲ್ಲಿರುವ ಪ್ರಕರಣದಲ್ಲಿ ಅರಣ್ಯ ಅತಿಕ್ರಮಣದಾರರಿಗೆ ವ್ಯತಿರಿಕ್ತವಾಗಿ ಆದೇಶ ಬರದಂತೆ ಸರ್ಕಾರ ಎಚ್ಚರವಹಿಸಬೇಕಾಗಿದೆ ಎಂದು ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವಾ ಹೇಳಿದರು.

ನಗರದಲ್ಲಿ ಶುಕ್ರವಾರ ಮಾತನಾಡಿದ ಅವರು, ‘ಕೆನರಾ ಕ್ಷೇತ್ರದ ಸಂಸದೆ ಆಗಿದ್ದ ವೇಳೆ ಸಂಸತ್ ಅಧಿವೇಶನದಲ್ಲಿ ಅರಣ್ಯವಾಸಿಗಳ ಸಮಸ್ಯೆಗಳ ಕುರಿತು ಸರ್ಕಾರದ ಗಮನಸೆಳೆದಿದ್ದೆ. ಇಂದಿಗೂ ಅರಣ್ಯ ಕಾಯ್ದೆ ಮೂಲಕ ಅರಣ್ಯವಾಸಿಗಳಿಗೆ ಭೂಮಿ ಹಕ್ಕು ದೊರಕದಿರುವುದು ಬೇಸರದ ಸಂಗತಿಯಾಗಿದೆ. ಇದು ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆ ಪ್ರತಿಬಿಂಬಿಸಿದೆ’ ಎಂದರು.

ಇದೇ ವೇಳೆ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಅವರು 30 ವರ್ಷಗಳ ಹೋರಾಟದ ಕುರಿತ ಸ್ಮರಣ ಸಂಚಿಕೆಯನ್ನು ಆಳ್ವಾ ಅವರಿಗೆ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.