ಶಿರಸಿ: ‘ಅಂಗವಿಕಲರು ಕೂಡ ಮಾನವ ಸಂಪತ್ತಿನ ಒಂದು ಭಾಗವಾಗಿದ್ದು, ಸರ್ಕಾರ ನೀಡುವ ಸೌಲಭ್ಯ ಪಡೆದು ರಾಷ್ಟ್ರ ನಿರ್ಮಾಣಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ನಗರದ ರಾಘವೇಂದ್ರ ಮಠದಲ್ಲಿ ಶನಿವಾರ ಆಯೋಜಿಸಿದ್ದ ಸಾಮಾಜಿಕ ಅಧಿಕಾರಿತ ಶಿಬಿರ ಹಾಗೂ ರಾಷ್ಟ್ರೀಯ ವಯೋಶ್ರೀ ಯೋಜನೆ ಫಲಾನುಭವಿಗಳಿಗೆ ಸಲಕರಣೆ ವಿತರಿಸಿ ಅವರು ಮಾತನಾಡಿದರು.
‘ಅಂಗವಿಕಲರ ಜೀವನಕ್ಕೆ ಆತ್ಮವಿಶ್ವಾಸ ತುಂಬುವ ಪ್ರಯತ್ನ ಇದಾಗಿದೆ. ಅಂಗವಿಕಲರ ಜೀವನದ ಜತೆ ಕೇಂದ್ರ, ರಾಜ್ಯ ಸರ್ಕಾರಗಳು ಸದಾ ಇವೆ. ಯಾವುದೇ ವ್ಯಕ್ತಿಯ ಶಕ್ತಿ, ಪ್ರತಿಭೆ ರಾಷ್ಟ್ರದ ನಿರ್ಮಾಣದಲ್ಲಿ ಪಾಲು ನೀಡಬೇಕು. ಈ ನಿಟ್ಟಿನಲ್ಲಿ ಅಂಗವಿಕಲರ ಆತ್ಮವಿಶ್ವಾಸ ಹೆಚ್ಚಿಸುವ ಕಾರ್ಯ ಮಾಡಲಾಗುತ್ತಿದೆ’ ಎಂದರು.
‘ಸರ್ಕಾರದ ವಿವಿಧ ಯೋಜನೆಗಳಲ್ಲಿ ಶೇಕಡಾ 5 ರಷ್ಟು ಮೀಸಲಾತಿ ಸದಾ ಇರುತ್ತದೆ. ಅವುಗಳ ಸದುಪಯೋಗ ಪಡೆಯಬೇಕು ಎಂದ ಸಂಸದ ಕಾಗೇರಿ, 2 ಯೋಜನೆಗಳ ಮೂಲಕ ಜಿಲ್ಲೆಯಾದ್ಯಂತ 1,142 ಜನರಿಗೆ ₹1.20 ಕೋಟಿ ಮೌಲ್ಯದ ಸಲಕರಣೆ ವಿತರಣೆ ಮಾಡಲಾಗುತ್ತಿದೆ’ ಎಂದು ಹೇಳಿದರು.
‘ವಯಸ್ಸಿಗೆ ಸಂಬಂಧಿಸಿದ ದೌರ್ಬಲ್ಯಗಳು ಅಥವಾ ಅಂಗವೈಕಲ್ಯಗಳಿಂದ ಬಳಲುತ್ತಿರುವ ಬಿಪಿಎಲ್ ವರ್ಗದ ಹಿರಿಯ ನಾಗರಿಕರಿಗೆ ದೈಹಿಕ ಸಾಧನಗಳು ಮತ್ತು ನೆರವಿನ ಜೀವನ ಸಾಧನಗಳನ್ನು ಒದಗಿಸುವ ಉದ್ದೇಶದಿಂದ ರಾಷ್ಟ್ರೀಯ ವಯೋಶ್ರೀ ಯೋಜನೆ ಅನುಷ್ಠಾನಗೊಂಡಿದ್ದು, ಅರ್ಹರು ಇದರ ಪ್ರಯೋಜನ ಪಡೆಯಬೇಕು’ ಎಂದು ಹೇಳಿದರು.
ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ಉಪಾಧ್ಯಕ್ಷ ರಮಾಕಾಂತ ಭಟ್, ಸ್ಥಾಯಿ ಸಮಿತಿ ಅಧ್ಯಕ್ಷ ರಾಘು ಶೆಟ್ಟಿ, ತಾಲ್ಲೂಕು ಪಂಚಾಯಿತಿ ಇಒ ಚನ್ನಬಸಪ್ಪ ಹಾವಣಗಿ, ಯೋಜನೆಯ ಅಂಕಿತ ರೈ, ರಾಘವೇಂದ್ರ ಇತರರಿದ್ದರು.
ಅಂಗವಿಕಲರು ತಮ್ಮೊಳಗಿನ ಕೀಳರಿಮೆಯಿಂದ ಹೊರಬರಬೇಕು. ಆಗ ಮಾತ್ರ ಸಮಾಜದ ಮುಖ್ಯವಾಹಿನಿ ಜತೆ ಸಾಗಲು ಸಾಧ್ಯವಿಶ್ವೇಶ್ವರ ಹೆಗಡೆ ಕಾಗೇರಿ ಸಂಸದ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.