ADVERTISEMENT

ಮಳೆ ಸಂಬಂಧಿ ರಜೆ ಘೋಷಣೆ: ತಹಶೀಲ್ದಾರ್, ಬಿ.ಇ.ಒ.ಗೆ ಹೊಣೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2022, 13:57 IST
Last Updated 10 ಜುಲೈ 2022, 13:57 IST
   

ಕಾರವಾರ: ‘ಜಿಲ್ಲೆಯಲ್ಲಿ ಮಳೆಯ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿದೆ. ಆದ್ದರಿಂದ ಜುಲೈ 11ರಂದು ಯಾವುದೇ ತಾಲ್ಲೂಕಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

‘ಮಳೆಯಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ ಅವಶ್ಯವೆನಿಸಿದರೆ, ಮಕ್ಕಳ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ತಹಶೀಲ್ದಾರ್ ಕ್ರಮ ಕೈಗೊಳ್ಳಬೇಕು. ಶಾಲೆಗಳ ಸುತ್ತಮುತ್ತ ನೀರು ತುಂಬಿದ್ದು, ವಿದ್ಯಾರ್ಥಿಗಳು ಬರಲು ಸಾಧ್ಯವೇ ಎಂದು ಪರಿಶೀಲಿಸಬೇಕು. ಮಕ್ಕಳು ಬರುವ ದಾರಿಯಲ್ಲಿ ತೊರೆ, ತೋಡು, ಕಾಲುವೆ, ಕೆರೆ, ಹೊಳೆಗಳು ಇವೆಯೇ ಎಂಬುದನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು’ ಎಂದು ಸೂಚಿಸಿದ್ದಾರೆ.

‘ಶಾಲಾ ಕೊಠಡಿಗಳು, ಕಟ್ಟಡದ ಚಾವಣಿ ಭದ್ರವಾಗಿರುವುದನ್ನು ದೃಢಪಡಿಸಿಕೊಂಡು ತರಗತಿಗಳನ್ನು ನಡೆಸಬೇಕು. ತುಂಡಾದ ವಿದ್ಯುತ್ ಕಂಬ, ತಂತಿಯ ಸಂಪರ್ಕಕ್ಕೆ ಬಾರದಂತೆ ಎಚ್ಚರಿಕೆ ವಹಿಸಲು ತಿಳಿಸಬೇಕು’ ಎಂದು ಅವರು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.