
ಕಾರವಾರ: ‘ನಾನು ಏನೆ ತಪ್ಪು ಮಾಡಿದರೂ ಶಿಕ್ಷಕರಿಗೆ ಕೆಟ್ಟ ಹೆಸರು ಬರುತ್ತದೆ ಎನ್ನುವ ಕಾರಣಕ್ಕೆ ಶಿಕ್ಷಕರ ಪ್ರೀತಿ ವಿಶ್ವಾಸವನ್ನು ನೆನಪಿಟ್ಟುಕೊಂಡು ತಪ್ಪು ಮಾಡದಂತೆ ಎಚ್ಚರಿಕೆ ವಹಿಸಿದ್ದೇನೆ’ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.
ಇಲ್ಲಿನ ಶಿವಾಜಿ ಪ್ರೌಢಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಎಸ್ಎಸ್ಎಲ್‌ಸಿ ಫಲಿತಾಂಶ ಸುಧಾರಣಾ ಸಭೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‘ಶಿಕ್ಷಕರು ದಾರಿ ತಪ್ಪಿದರೆ ಸಮಾಜ ದಾರಿ ತಪ್ಪುತ್ತದೆ. ಶಿಕ್ಷಕರ ಪ್ರತಿನಿಧಿಯಾಗಿರುವ ಕಾರಣದಿಂದಲೇ ಪ್ರತಿ ಹೆಜ್ಜೆಯನ್ನು ಎಚ್ಚರದಿಂದ ಇಡುತ್ತಿದ್ದೇನೆ’ ಎಂದರು.
ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್, ಶಾಲಾ ಶಿಕ್ಷಣ ಇಲಾಖೆಯ ಬೆಳಗಾವಿ ವಿಭಾಗದ ಹೆಚ್ಚುವರಿ ಶಿಕ್ಷಣ ಆಯುಕ್ತ ಈಶ್ವರ ಉಳ್ಳಾಗಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕ ಈಶ್ವರ ನಾಯ್ಕ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಅಲ್ಲಾಭಕ್ಷ, ಡಿಡಿಪಿಐ ಲತಾ ನಾಯಕ, ಬಿಇಓ ಉಮೇಶ ನಾಯ್ಕ, ಉಡುಪಿಯ ಟೀಚರ್ ಕೋ-ಆಪರೇಟವ್ ಸೊಸೈಟಿ ಅಧ್ಯಕ್ಷ ದಿನಕರ ಶೆಟ್ಟಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.