ADVERTISEMENT

Teachers' Day | ಶಿಕ್ಷಕರ ಸದುದ್ದೇಶಕ್ಕೆ ಸಮಾಜದ ಬೆಂಬಲ ಅಗತ್ಯ: ಭೀಮಣ್ಣ ನಾಯ್ಕ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2025, 4:27 IST
Last Updated 6 ಸೆಪ್ಟೆಂಬರ್ 2025, 4:27 IST
ಶಿರಸಿಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು
ಶಿರಸಿಯಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು   

ಶಿರಸಿ: ‘ಶಿಕ್ಷಕರು ಕೇವಲ ಅಕ್ಷರ ಜ್ಞಾನ ನೀಡುವವರಲ್ಲ, ಬದಲಾಗಿ ದೇಶಕ್ಕೆ ಸುಭದ್ರ ಬುನಾದಿ ಹಾಕುವವರಾಗಿದ್ದಾರೆ.  ಅವರನ್ನು ಎಲ್ಲರೂ ಗೌರವದಿಂದ ಕಾಣಬೇಕು’ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ, ಶಿಕ್ಷಕರನ್ನು ಸನ್ಮಾನಿಸಿ ಅವರು ಮಾತನಾಡಿದರು.

‘ಕೆಲವು ಬಾರಿ ಮಕ್ಕಳನ್ನು ಸರಿದಾರಿಗೆ ತರಲು ಶಿಕ್ಷಕರು ಶಿಕ್ಷಿಸುವುದುಂಟು. ಅಂಥ ಘಟನೆಗಳನ್ನು ದೊಡ್ಡದು ಮಾಡಿ, ಶಿಕ್ಷಕರನ್ನು ಅಮಾನತು ಮಾಡುವಂಥ ಕ್ರಮ ನಿಲ್ಲಬೇಕು. ಶಿಕ್ಷಕರು ಸದುದ್ದೇಶದಿಂದ ಮಾಡುವ ಕಾರ್ಯಕ್ಕೆ ಸಮಾಜ ಬೆಂಬಲವಾಗಿ ನಿಲ್ಲಬೇಕು’ ಎಂದರು. 

ಕಾರ್ಯಕ್ರಮದ ಅಂಗವಾಗಿ ಶೈಕ್ಷಣಿಕ ಜಿಲ್ಲೆಯ 18 ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು. 

ಹಿರಿಯ ಪ್ರಾಥಮಿಕ ಶಾಲೆಯ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ

ಉಪವಿಭಾಗಾಧಿಕಾರಿ ಕೆ.ವಿ.ಕಾವ್ಯಾರಾಣಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ನಾಯ್ಕ, ನಗರಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ, ತಹಶೀಲ್ದಾರ್‌ ಪಟ್ಟರಾಜ ಗೌಡ, ಪೌರಾಯುಕ್ತ ಪಿ.ಎಂ. ಚನ್ನಪ್ಪನವರ,  ತಾಲ್ಲೂಕು ಪಂಚಾಯಿತಿ ಇಒ ಚನ್ನಬಸಪ್ಪ ಹಾವಣಗಿ, ಡಯಟ್ ಪ್ರಾಚಾರ್ಯ ಎಂ.ಎಸ್.ಹೆಗಡೆ, ಬಿಇಒ ನಾಗರಾಜ ನಾಯ್ಕ, ಪ್ರಮುಖರಾದ ಕಿರಣ ನಾಯ್ಕ, ನಾರಾಯಣ ದೈಮನೆ, ಸುರೇಶ ಪಟಗಾರ ಇತರರಿದ್ದರು. ಡಿಡಿಪಿಐ ಡಿ.ಆರ್.ನಾಯ್ಕ ಪ್ರಾಸ್ತಾವಿಕ ಮಾತನಾಡಿದರು.

ಪ್ರೌಢಶಾಲೆ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ 
ಶಾಲೆಯಿಂದ ಹೊರಗುಳಿಯುವ ಮಕ್ಕಳನ್ನು ಶಾಲೆಗೆ ಮರು ಸೇರ್ಪಡೆ ಮಾಡಲು ಶಿಕ್ಷಕರಿಗೆ ಸಮಾಜದ ಸಹಕಾರ ಅಗತ್ಯ
ಭೀಮಣ್ಣ ನಾಯ್ಕ ಶಾಸಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.