ಆರ್.ವಿ.ದೇಶಪಾಂಡೆ
ಹಳಿಯಾಳ: ‘ಜಮ್ಮು ಕಾಶ್ಮೀರದ ಪಹಲ್ಗಾಮ್‍ನಲ್ಲಿ ಉಗ್ರರ ದಾಳಿಗೆ ಬಲಿಯಾದ ಕುಟುಂಬಗಳಿಗೆ ಕೇಂದ್ರ ಸರ್ಕಾರ ಸೂಕ್ತ ಪರಿಹಾರ ನೀಡಬೇಕು’ ಎಂದು ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಒತ್ತಾಯಿಸಿದ್ದಾರೆ.
‘ಉಗ್ರರ ದಾಳಿಯ ಘಟನೆ ಅಮಾನವೀಯ ಕೃತ್ಯ. ಇದನ್ನು ಖಂಡಿಸುತ್ತೇನೆ. ಇಂತಹ ಘಟನೆ ಮರುಕಳಿಸಿದಂತೆ ಸರ್ಕಾರ ಎಚ್ಚರವಹಿಸಬೇಕು. ದುರ್ಘಟನೆಯಲ್ಲಿ ಮೃತರಾದವರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.
‘ಪೈಶಾಚಿಕ ಕೃತ್ಯ ನಡೆಸಿದ ಉಗ್ರರನ್ನು ಕೇಂದ್ರ ಸರ್ಕಾರ ಸಂಪೂರ್ಣ ಮಟ್ಟಹಾಕಬೇಕು. ಅವರ ವಿರುದ್ಧ ಅತ್ಯಂತ ಕಠಿಣ ಕ್ರಮವನ್ನು ಕೈಗೊಂಡು ಉಗ್ರಗಾಮಿ ಚಟುವಟಿಕೆ ದೇಶದಲ್ಲಿ ಪುನಃ ನಡೆಯದಂತೆ ಎಚ್ಚರಿಕೆ ಸಂದೇಶ ನೀಡಬೇಕು’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.