
ಬಂಧನ
ಗೋಕರ್ಣ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇಲೆ, ಎರಡು ಪ್ರತ್ಯೇಕ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಭಾನುವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಳೆ ಹುಬ್ಬಳ್ಳಿಯ ನಿವಾಸಿಗಳಾದ ಗಂಗಾಧರ ಆನಂದ ರೇಷ್ಮೆ (29), ಸುನೀಲ್ ಶೇಖರಯ್ಯ ಗುಮ್ಮತ್ತಿಮಠ (30) ಹಾಗೂ ಇರ್ಫಾನ್ ಚಮನ್ ಸಾಬ್ ಹೆಡಿಯಾಳ (27) ಆರೋಪಿಗಳು.
ಮೂವರು ಇಲ್ಲಿಯ ಮೇಲಿನಕೇರಿಯ ಸೀಬರ್ಡ್ ಬಸ್ ಕಚೇರಿಯ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಮಾದಕ ಪದಾರ್ಥ ಗಾಂಜಾ ಸೇವಿಸಿ, ಅಮಲಿನಲ್ಲಿ ಅಲೆದಾಡುತ್ತಿದ್ದಾಗ ಪೊಲೀಸ್ ಉಪನಿರೀಕ್ಷಕ ಖಾಧರ್ ಭಾಷಾ ಮತ್ತು ಶಶಿಧರ ಕೆ.ಎಚ್. ನೇತೃತ್ವದ ಪೊಲೀಸ್ ತಂಡಕ್ಕೆ ಸಿಕ್ಕಿಬಿದ್ದಿದ್ದಾರೆ.
ಪೊಲೀಸರು ಆರೋಪಿಗಳನ್ನು ವೈದ್ಯಕೀಯ ತಪಾಸಣೆೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿದ್ದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಗೋಕರ್ಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.