ADVERTISEMENT

ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಅಮಾನತಿಗೆ ಶಿಫಾರಸು

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2025, 14:21 IST
Last Updated 21 ಫೆಬ್ರುವರಿ 2025, 14:21 IST
ಎಚ್.ವಿ.ಜಯಂತ್
ಎಚ್.ವಿ.ಜಯಂತ್   

ಕಾರವಾರ: ಪ್ರವಾಸೋದ್ಯಮ ಇಲಾಖೆಯ ಪ್ರಭಾರ ಉಪನಿರ್ದೇಶಕ ಎಚ್.ವಿ.ಜಯಂತ್ ಸರ್ಕಾರಿ ನೌಕರರಿಗೆ ಸಲ್ಲದ ರೀತಿ ವರ್ತಿಸಿದ್ದಾರೆ ಎಂಬ ಕಾರಣ ನೀಡಿ ಅವರನ್ನು ಹುದ್ದೆಯಿಂದ ಅಮಾನತುಗೊಳಿಸಲು ಪ್ರವಾಸೋದ್ಯಮ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಶಿಫಾರಸು ಮಾಡಿದ್ದಾರೆ.

ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾಗಿ ಕಾರವಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಯಂತ್ ಅವರಿಗೆ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರ ಹುದ್ದೆಯ ಪ್ರಭಾರ ವಹಿಸಲಾಗಿತ್ತು. ಫೆಬ್ರುವರಿ 14ರಂದು ಜಿಲ್ಲಾಧಿಕಾರಿ ಕಚೇರಿ ಕಟ್ಟಡಕ್ಕೆ ಸ್ಥಳಾಂತರಿಸುವ ವೇಳೆ ಪ್ರವಾಸೋದ್ಯಮ ಇಲಾಖೆ ಕಚೇರಿಯಲ್ಲಿ ಮಂಚ, ಹಾಸಿಗೆಗಳು ಪತ್ತೆಯಾಗಿದ್ದವು. ಸರ್ಕಾರಿ ಕಚೇರಿಯಲ್ಲಿ ವಾಸದ ಮನೆಯ ರೀತಿ ಸೌಕರ್ಯ ಅಳವಡಿಸಿದ್ದ ಕಾರಣ ಕೇಳಿ ಜಿಲ್ಲಾಧಿಕಾರಿ ಅವರು ಉಪನಿರ್ದೇಶಕ ಜಯಂತ್‍ಗೆ ನೋಟಿಸ್ ನೀಡಿದ್ದರು.

‘ಜಿಲ್ಲಾಧಿಕಾರಿ ನೋಟಿಸ್‍ಗೆ ಉತ್ತರಿಸದೆ ನಿರ್ಲಕ್ಷ್ಯ ತೋರಿರುವುದರ ಜೊತೆಗೆ ಸರ್ಕಾರಿ ನೌಕರರಿಗೆ ಸಲ್ಲದ ರೀತಿ ವರ್ತಿಸಿದ ಕಾರಣಕ್ಕೆ ಇಲಾಖಾ ವಿಚಾರಣೆ ಬಾಕಿ ಇರಿಸಿ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಹುದ್ದೆಯಿಂದ ಅಮಾನತು ಮಾಡಲಾಗುತ್ತಿದೆ. ಅವರ ಮೂಲ ಇಲಾಖೆಯಿಂದ ನಿಯಮಾನುಸಾರ ಕ್ರಮ ಜರುಗಿಸಬೇಕು’ ಎಂದು ಪ್ರವಾಸೋದ್ಯಮ ಇಲಾಖೆಯಿಂದ ಶಿಫಾರಸು ಮಾಡಲಾಗಿದೆ.  

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.